ಕಾನ್ಪುರ: ಇಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ವಿಕೆಟ್ ಕೀಪರ್ ಆಗಿ ವೃದ್ದಿಮಾನ್ ಸಾಹಾ ಬದಲು ಕೆ.ಎಸ್.ಭರತ್ ಕಣಕ್ಕಿಳಿದರು.
ವೃದ್ದಿಮಾನ್ ಸಾಹಾ ಅವರಿಗೆ ಕುತ್ತಿಗೆಯಲ್ಲಿ ನೋವು ಕಂಡುಬಂದ ಕಾರಣ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಕೆ.ಎಸ್.ಭರತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತಿದ್ದಾರೆ.
“ವೃದ್ಧಿಮಾನ್ ಸಹಾ ಅವರ ಕುತ್ತಿಗೆಯಲ್ಲಿ ಬಿಗಿತವಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ ಮತ್ತು ಅವರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅವರ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಾರೆ” ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಇದನ್ನೂ ಓದಿ:ನಥಿಂಗ್ ನಲ್ಲಿ ಯುವರಾಜ್ ಸಿಂಗ್, ಕರಣ್ ಜೋಹರ್ ಹೂಡಿಕೆ
79 ಓವರ್ ಅಂತ್ಯಕ್ಕೆ ನ್ಯೂಜಿಲ್ಯಾಂಡ್ ಒಂದು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದೆ. ಟಾಮ್ ಲ್ಯಾಥಂ 72 ರನ್ ಮತ್ತು ನಾಯಕ ಕೇನ್ ವಿಲಿಯಮ್ಸನ್ 16 ರನ್ ಗಳಿಸಿ ಆಡುತ್ತಿದ್ದಾರೆ. ಆರಂಭಿಕ ಆಟಗಾರ ವಿಲ್ ಯಂಗ್ 89 ರನ್ ಗಳಿಸಿ ಅಶ್ವಿನ್ ಎಸೆತದಲ್ಲಿ ಔಟಾದರು. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಸಿದೆ.