Advertisement

INDIA A; ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯದ ವಿಕೆಟ್ ಕೀಪರ್’ಗೆ ಎ ತಂಡ ನಾಯಕತ್ವ

12:28 PM Dec 01, 2023 | Team Udayavani |

ಹೊಸದಿಲ್ಲಿ: ಆಂಧ್ರ ಪ್ರದೇಶ ವಿಕೆಟ್ ಕೀಪರ್ ಕೆಎಸ್ ಭರತ್ ಅವರು ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿಲ್ಲ. ಆದರೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರು ಎರಡು ಪಂದ್ಯಗಳ ಎ ತಂಡಗಳ ಸರಣಿಗೆ ಕೋನ ಭರತ್ ಅವರು ನಾಯಕನಾಗಿ ನೇಮಕವಾಗಿದ್ದಾರೆ.

Advertisement

ಭರತ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಧ್ರುವ್ ಜುರೆಲ್, ಮಾನವ್ ಸುತಾರ್ ಮತ್ತು ವಿಧ್ವತ್ ಕಾವೇರಪ್ಪ ಸೇರಿದಂತೆ ಎರಡು ಪಂದ್ಯಗಳಿಗೆ ಎರಡು ಪ್ರತ್ಯೇಕ ತಂಡಗಳನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ.

ಆದಾಗ್ಯೂ, ಬಂಗಾಳದ ಅಗ್ರ ಕ್ರಮಾಂಕದ ಬ್ಯಾಟರ್ ಅಭಿಮನ್ಯು ಈಶ್ವರನ್ ಅವರ ಸೇರ್ಪಡೆಯು ಫಿಟ್ನೆಸ್ ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಪ್ರಕಟಣೆ ಹೇಳಿದೆ.

30 ವರ್ಷ ವಯಸ್ಸಿನ ಕೆಎಸ್ ಭರತ್ ಜೂನ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ನಲ್ಲಿ ಕೊನೆಯ ಬಾರಿಗೆ ಭಾರತ ತಂಡವಾಗಿ ಆಡಿದ್ದರು.

ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ರನ್ ಗಳಿಸಿರುವ ಕರ್ನಾಟಕದ ದೇವದತ್ ಪಡಿಕ್ಕಲ್ ಅವರನ್ನು ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗಿದೆ.

Advertisement

ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ ಮೂರು ದಿನಗಳ ಪಂದ್ಯಕ್ಕಾಗಿ ಬಿಸಿಸಿಐ ಒಂದು ಇಂಟರ್ ಸ್ಕ್ವಾಡ್ ಸಹ ಹೆಸರಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್ ಬಾಲ್ ಸರಣಿಯಿಂದ ಹೊರಗುಳಿಯಲಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ತಂಡದ ಭಾಗವಾಗಿದ್ದಾರೆ.

ತಂಡಗಳು

ಮೊದಲ ಚತುರ್ದಿನ ಪಂದ್ಯಕ್ಕಾಗಿ ಭಾರತ ಎ ತಂಡ: ಕೆಎಸ್ ಭರತ್ (ನಾ, ವಿ.ಕೀ), ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್*, ದೇವದತ್ ಪಡಿಕ್ಕಲ್, ಪ್ರದೋಶ್ ರಂಜನ್ ಪಾಲ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಶಾರ್ದೂಲ್ ಠಾಕೂರ್, ಪುಲ್ಕಿತ್ ನಾರಂಗ್, ಸೌರಭ್ ಕುಮಾರ್, ಮಾನವ್ ಸುತಾರ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ತುಷಾರ್ ದೇಶಪಾಂಡೆ.

2ನೇ ಚತುರ್ದಿನ ಪಂದ್ಯಕ್ಕೆ ಭಾರತ ಎ ತಂಡ: ಕೆ.ಎಸ್.ಭರತ್ (ನಾ, ವಿ.ಕೀ), ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್*, ರುತುರಾಜ್ ಗಾಯಕ್‌ವಾಡ್, ತಿಲಕ್ ವರ್ಮಾ, ಧ್ರುವ್ ಜುರೆಲ್ (ವಿ.ಕೀ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮಾನವ್ ಸುತಾರ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ನವದೀಪ್ ಸೈನಿ.

ಭಾರತ ಅಂತರ ತಂಡ ಮೂರು ದಿನಗಳ ಪಂದ್ಯ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಅಭಿಮನ್ಯು ಈಶ್ವರನ್*, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸರ್ಫರಾಜ್ ಖಾನ್, ಪ್ರದೋಶ್ ರಂಜನ್ ಪಾಲ್, ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಪುಲ್ಕಿತ್ ನಾರಂಗ್, ಹರ್ಷಿತ್ ರಾಣಾ, ಶಾರ್ದೂಲ್ ಠಾಕೂರ್, ಸೌರಭ್ ಕುಮಾರ್, ಮಾನವ್ ಸುತಾರ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ನವದೀಪ್ ಸೈನಿ

Advertisement

Udayavani is now on Telegram. Click here to join our channel and stay updated with the latest news.

Next