ಕಲಬುರಗಿ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಭಾರಿ ಮಳೆಯಿಂದ ಆಗಿರುವ ಹಾನಿ ಕುರಿತು ಸಮೀಕ್ಷೆ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷ ಮೊದಲ ಹಂತದ ಮಳೆ ಹಾನಿ ಮಾಹಿತಿ ಸಂಗ್ರಹಿಸಲಾಗಿದೆ. ಈಗ ಮತ್ತೆ ಮಳೆ ಸುರಿಯಲು ಆರಂಭಿಸಿದ್ದು, ನಷ್ಟ ಮತ್ತು ಹಾನಿ ಬಗ್ಗೆ ಸಮೀಕ್ಷೆ ಸೂಚಿಸಲಾಗಿದೆ. ಮಳೆಗೆ ಹಾಳಾಗಿರುವ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳೆದ ಬಾರಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿತ್ತು. ಆಗ ರಾಜ್ಯ ಸರ್ಕಾರ 1,500 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:ಬಿಹಾರ ಚುನಾವಣೆ 2020: 3ವರ್ಷ V/S 30 ವರ್ಷ! ಪಪ್ಪು ಯಾದವ್ ಪಿಡಿಎ ಮುಖ್ಯಮಂತ್ರಿ ಅಭ್ಯರ್ಥಿ