ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಡವಾಗಿ ಜ್ಞಾನೋದಯ ಆಗಿದೆ. ಮೊದಲೇ ಆಗಿದ್ದರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದರು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಭಾನುವಾರ ಸಂಜೆ ಚಿತ್ರದುರ್ಗದಲ್ಲಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರ ಜತೆ ಮಾತನಾಡಿದರು.
ಕಾಂಗ್ರೆಸ್ ದೋಸ್ತಿಯಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮೊದಲೇ ಈ ಆಲೋಚನೆ ಮಾಡಿದ್ದರೆ ನಾವು ಕಾಂಗ್ರೆಸ್ಸಿನಿಂದ ಮತ್ತೆ ಇಲ್ಲಿ ತೆಗೆದುಕೊಳ್ಳುವ ಪ್ರಶ್ನೆ ಬರುತ್ತಿರಲಿಲ್ಲ ಎಂದರು.
ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ,ಈ ಬಗ್ಗೆ ಕೇಂದ್ರದ ನಾಯಕರು ಹಾಗೂ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ತರುವ ಬಗ್ಗೆ ಚರ್ಚಿಸಿದ್ದೇವೆ. ಲವ್ ಜಿಹಾದ್ ಕುರಿತು ನಿರ್ಣಯ ಆಗಿದ್ದು, ದಾಖಲೆ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದರು.
ಇದನ್ನೂ ಓದಿ:ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಹೊಡೆದು ಕೊಂದ ಪತಿ
ಕುರುಬ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸುವ ಸಂಬಂಧ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಜನವರಿ 15 ರಿಂದ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ. ಫೆಬ್ರವರಿ 7 ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದ್ದು, ಹತ್ತು ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.