Advertisement
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಾರ್ಥ ತಾಲೂಕಿಗೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಒಳ ಜಗಳದಿಂದಾಗಿ 17 ಶಾಸಕರು ಬಿಜೆಪಿಗೆ ಬಂದಿದ್ದಾರೆ. ಈಗ ಏನೇನೋ ಆರೋಪಿಸುವ ಅವರಿಗೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಇರಲಿಲ್ಲವೇ? ನಮ್ಮ ಪಕ್ಷದ ಬಗ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಜೈಲಿಗೆ ಹೋಗಿ ಬಂದಿರುವ ಬಗ್ಗೆ ಯಾಕೆ ಮಾತಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಶಾಸಕ ಯತ್ನಾಳ್ ಹಿಂದುತ್ವವಾದಿ. ಅವರ ತತ್ವ ಸಿದ್ಧಾಂತಗಳನ್ನು ನಾನೂ ಒಪ್ಪುತ್ತೇನೆ. ಪಕ್ಷ ಸಂಘಟನೆಗೆ ಅವರು ಶ್ರಮಿಸಿದ್ದಾರೆ. ಆದರೆ ಕೇಂದ್ರದ ಪ್ರತಿನಿಧಿಯಾಗಿ ರಾಜ್ಯ ಉಸ್ತುವಾರಿ ವಹಿಸಿಕೊಂಡ ಅರುಣ್ ಸಿಂಗ್ ಬಗೆಗೆ ಹಗುರವಾಗಿ ಮಾತನಾಡುವುದು ಒಳ್ಳೆಯದಲ್ಲ. ತಮ್ಮ ಹೇಳಿಕೆಯನ್ನು ಹಿಂಪಡೆದುಕೊಳ್ಳಬೇಕು. ಪಕ್ಷದಲ್ಲಿ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇರಬಹುದು. ಅದನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳಬೇಕು. ನಾನು ಅವರಿಗೆ ಸಲಹೆ ನೀಡುತ್ತಿಲ್ಲ. ಬದಲಾಗಿ ನನ್ನ ಸ್ನೇಹಿತರೆಂದು ಕೈಮುಗಿದು ಪ್ರಾರ್ಥಿಸುತ್ತಿದ್ದೇನೆ ಎಂದರು.