Advertisement

Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ

10:13 AM Dec 31, 2024 | Team Udayavani |

ಬೆಂಗಳೂರು: ಕೌಟುಂಬಿಕ ಕಾರಣಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ(ಕೆಎಸ್‌ಡಿಎಲ್‌)ದ ಖರೀದಿ ವಿಭಾಗ ಅಧಿಕಾರಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮಹಾಲಕ್ಷ್ಮೀ ಲೇಔಟ್‌ನ ಮುನೇಶ್ವರ ಬ್ಲಾಕ್‌ ನಿವಾಸಿ ಅಮೃತ್‌ ಶಿರೂರ್‌ (40) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಡಿ.28ರಂದು ಸಂಜೆ ಮನೆ  ಕೋಣೆಯ ಫ್ಯಾನ್‌ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾತ್ರಿ ಮನೆಯ ಮಾಲಿಕ ಗಿರೀಶ್‌ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಅಮೃತ್‌ ಶಿರೂರ್‌, 10 ವರ್ಷಗಳಿಂದ ಕೆಎಸ್‌ಡಿಎಲ್‌ ಖರೀದಿ ವಿಭಾಗದಲ್ಲಿ ಸಹಾಯಕ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ವಿಚಾರಕ್ಕೆ ಇಬ್ಬರು ಪತ್ನಿಯರು ಮತ್ತು ಮಕ್ಕಳಿಂದ ದೂರವಾಗಿದ್ದಾರೆ. ಒಂದೂವರೆ ತಿಂಗಳ ಹಿಂದಷ್ಟೇ ಹಿರಿಯ ಅಧಿಕಾರಿಯಾಗಿ ಮುಂಬಡ್ತಿ ಪಡೆದು ಶಿವಮೊಗ್ಗದಿಂದ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, ಇಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು. ಮಹಾಲಕ್ಷಿ$¾à ಲೇಔಟ್‌ನ ಮುನೇಶ್ವರ ಬ್ಲಾಕ್‌ನ ಗಿರೀಶ್‌ ಎಂಬುವರ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.

ಡಿ.28ರಂದು ಕರ್ತವ್ಯಕ್ಕೆ ಗೈರಾಗಿದ್ದ ಅಮೃತ್‌, ಸಂಜೆ 6 ಗಂಟೆ ಸುಮಾರಿಗೆ ಮನೆಯ ಕೋಣೆಯ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಮನೆ ಮಾಲಿಕ ಗಿರೀಶ್‌ ಅಚಾನಕ್‌ ಆಗಿ ಅಮೃತ್‌ ಮನೆ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ತಂದೆ ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಪತಿಯಾಗಲಿಲ್ಲ: ಡೆತ್‌ನೋಟ್‌:

Advertisement

ಘಟನಾ ಸ್ಥಳದಲ್ಲಿ ಅಮೃತ್‌ ಶಿರೂರ್‌ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್‌ನೋಟ್‌ ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ. ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಕೆಲಸಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಜೀವನ ಜಿಗುಪ್ಸೆಯಾ ಗಿದೆ ಎಂದು ಬರೆದಿರುವುದು ಕಂಡು ಬಂದಿದೆ. ಇನ್ನು ಘಟನಾ ಸ್ಥಳದಲ್ಲೂ ಯಾವುದೇ ಸಂಶಯ ಕಂಡು ಬಂದಿಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಒಂದಷ್ಟು ಮಾಹಿತಿ ಗೊತ್ತಾಗಲಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

2 ಮದುವೆಯೂ  ಮುರಿದು ಬಿದ್ದಿತ್ತು! :

ಮೃತ ಅಮೃತ್‌ ಶಿರೂರ್‌ ಎರಡು ಮದುವೆಯಾಗಿದ್ದರು. ಮೊದಲಿಗೆ ಪ್ರೇಮವಿವಾಹವಾಗಿದ್ದು, ಕೆಲವೇ ತಿಂಗಳಲ್ಲಿ ಪತ್ನಿ ಯಿಂದ ವಿಚ್ಛೇದನ ಪಡೆದಿದ್ದರು. 2019ರಲ್ಲಿ ಶಿಕ್ಷಕಿಯೊಬ್ಬರನ್ನು ಎರಡನೇ ಮದುವೆಯಾಗಿದ್ದು, ದಂಪತಿ ನಡುವೆ ಮನ ಸ್ತಾಪವಾಗಿ ದೂರವಾಗಿದ್ದಾರೆ. ದಂಪತಿ ವಿಚ್ಛೇದನದ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಕೌಟುಂಬಿಕ ಕಾರಣಗಳಿಂದ ಮನನೊಂದಿದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಕೆಎಸ್‌ಡಿಎಲ್‌ ಅಧಿಕಾರಿ ಅಮೃತ್‌ ಶಿರೂರ್‌ ಎಂಬುವರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,  ನನ್ನ ಸಾವಿಗೆ ಯಾರು ಕಾರಣರಲ್ಲ ಡೆತ್‌ನೋಟ್‌ನಲ್ಲಿ ಉಲ್ಲೇಖೀಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.-ಸೈದುಲ್ಲಾ , ಡಿಸಿಪಿ ಉತ್ತರ ವಿಭಾಗ

Advertisement

Udayavani is now on Telegram. Click here to join our channel and stay updated with the latest news.

Next