Advertisement

PSI ಮರುಪರೀಕ್ಷೆ ಫಲಿತಾಂಶ ಪ್ರಕಟ

12:26 AM Mar 02, 2024 | Team Udayavani |

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪಿಎಸ್‌ಐ ಮರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

Advertisement

ಒಟ್ಟು 35,823 ಮಂದಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ವಿವಿಧ ಕಾರಣಗಳಿಂದಾಗಿ 33 ಮಂದಿಯ ಒಎಂಆರ್‌ ಪ್ರತಿಗಳು ತಿರಸ್ಕೃತವಾಗಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ತಿಳಿಸಿದ್ದಾರೆ.

ಅಭ್ಯರ್ಥಿಗಳು ತೆಗೆದುಕೊಂಡಿ ರುವ ಅಂಕಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಈ ಬಗ್ಗೆ ಆಕ್ಷೇಪಗಳು ಇದ್ದಲ್ಲಿ ಮಾ. 5ರೊಳಗೆ ಕೆಇಎಗೆ ಇ-ಮೇಲ್‌ ಮೂಲಕ ಸಲ್ಲಿಸಬಹುದಾಗಿದೆ. ಅದರ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಜ. 23ರಂದು ಮರು ಪರೀಕ್ಷೆ ನಡೆದಿತ್ತು. ಫೆ. 23ರಂದು ಕೀ ಉತ್ತರ ಬಿಡುಗಡೆ ಮಾಡಲಾಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next