Advertisement

ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

04:35 PM Apr 02, 2020 | Suhan S |

ಕಲಬುರಗಿ: ಮಹಾನಗರ ಪಾಲಿಕೆ ಮತ್ತು ಜಿಲ್ಲಾದ್ಯಂತ ಲಾಕ್‌ಡೌನ್‌ ಹಾಗೂ ನಿಷೇಧಾಜ್ಞೆ ಆದೇಶವನ್ನು ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದ್ದಾರೆ.

Advertisement

ರಾಜ್ಯದ ಇತರ ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್ 19 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಜಿಲ್ಲೆಯ ಜನರು ತುಂಬಾ ಜಾಗ್ರತೆ ವಹಿಸಬೇಕಿದೆ. ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮನೆಯಿಂದ ಹೊರಬಾರದಿರುವುದೇ ಕೋವಿಡ್ 19  ಸೋಂಕು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಪುನುರುತ್ಛರಿಸಿದ್ದಾರೆ.

ಕಲಬುರಗಿಯಲ್ಲಿ ಕೋವಿಡ್ 19 ಪಾಸಿಟಿವ್‌ ಬರುತ್ತಿಲ್ಲ ಎಂದು ಸಂಭ್ರಮಿಸುವ ಸಮಯ ಇದಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‌ಡೌನ್‌ ಹಾಗೂ ನಿಷೇಧಾಜ್ಞೆ ಪಾಲಿಸಲೇಬೇಕು. ಹೀಗಾಗಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುತ್ತಿದೆ. ಜಿಲ್ಲಾದ್ಯಂತ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸುವಂತೆ ನಗರ ಪೊಲೀಸ್‌ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕೋರಲಾಗುವುದು ಎಂದರು.

ನಗರದ ಎಪಿಎಂಸಿ ಆವರಣದ ತರಕಾರಿ ಮಾರ್ಕೆಟ್‌ನಲ್ಲಿ ಮಂಗಳವಾರ ಜನ ಜಂಗುಳಿಯೇ ಸೇರಿತ್ತು.

Advertisement

Udayavani is now on Telegram. Click here to join our channel and stay updated with the latest news.

Next