Advertisement

ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ KSRTC ಬಸ್ ಢಿಕ್ಕಿ: ಅಪಾಯದಿಂದ ಪಾರಾದ ಸಚಿವರು

07:44 PM Feb 19, 2021 | Team Udayavani |

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ,  ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.

Advertisement

ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.

ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:  ತುಳು ನಾಡಿನ ಅತಿ ಕಿರಿಯ ನಾಗದರ್ಶನ ಪಾತ್ರಿ “ಸಂಪ್ರೀತ”

Advertisement
Advertisement

Udayavani is now on Telegram. Click here to join our channel and stay updated with the latest news.

Next