ಬೆಂಗಳೂರು: ಶೇ.18 ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶೇ.18 ರಷ್ಟು ದರ ಹೆಚ್ಚಿಸಿ ಎಂದು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದೇವೆ. ಅಂತಿಮ ತೀರ್ಮಾನ ಸಿಎಂ ತೆಗೆದುಕೊಳ್ಳಲಿದ್ದಾರೆ ಎಂದೂ ಹೇಳಿದ್ದಾರೆ.
ಜತೆಗೆ ಇಂಧನ ದರ ಏರಿಳಿತಕ್ಕೆ ಅನುಗುಣವಾಗಿ ಮೂರು ತಿಂಗಳಿಗೊಮ್ಮೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿ ಎಂದೂ ಸ್ವತಃ ಮುಖ್ಯ ಮಂತ್ರಿಗಳೇ ಸಲಹೆ ನೀಡಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಲಾ ಗುತ್ತಿದೆ ಎಂದು ತಮ್ಮಣ್ಣ ತಿಳಿಸಿದ್ದಾರೆ.
3,000 ಹೊಸ ಬಸ್ ಖರೀದಿ: ರಾಜ್ಯದಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು 28 ಸ್ಲಿàಪರ್ ಕೋಚ್ ಹಾಗೂ ಲಕ್ಸುರಿ ಸೇರಿ ಮೂರು ಸಾವಿರ ಹೊಸ ಬಸ್ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಮೂರೂ ನಿಗಮಗಳಲ್ಲಿ ಹೊಸ ಬಸ್‌ಗಳಿಗೆ
ಬೇಡಿಕೆಯಿದೆ ಎಂದು ಹೇಳಿದ್ದಾರೆ.