ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಸೋಮವಾರ ಬೆಳಗಿನ 6.30 ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ತಿಪಟೂರು ಕಡೆಯಿಂದ ಬೆಂಗಳೂರಿನ ಕಡೆ ಹೋಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಬೆಂಗಳೂರಿನಿಂದ ಚಿಕ್ಕನಾಯಕನಹಳ್ಳಿಯ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಇದ್ದ ಯುವತಿ ಸೇರಿದಂತೆ ಇಬ್ಬರು ಬಲಿಯಾದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಮಕ್ಕಳಿಗೆ ಅಪ್ಪ-ಅಮ್ಮನ ಪ್ರೀತಿ ಪಡೆ ಯುವ ಹಕ್ಕಿದೆ: ಸುಪ್ರೀಂ ಕೋರ್ಟ್
ಕೆಎಸ್ಆರ್ ಟಿಸಿ ಬಸ್ಸಿನಲ್ಲಿದ್ದ ಮೂವತ್ತಕ್ಕೂ ಹೆಚ್ಚಿನ ಜನರಿಗೆ ಗಾಯವಾಗಿದ್ದು ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದಾರೆ. ಮೃತರ ಹೆಸರು ತಿಳಿದು ಬಂದಿಲ್ಲ.