Advertisement

CCTV: ನೋಡ ನೋಡುತ್ತಿದ್ದಂತೆ ಮಹಿಳೆಗೆ ಡಿಕ್ಕಿ ಹೊಡೆದ ಸರಕಾರಿ ಬಸ್… ಮಹಿಳೆಗೆ ಗಂಭೀರ ಗಾಯ

12:20 PM Feb 28, 2024 | Team Udayavani |

ಭದ್ರಾವತಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಸರಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ವಿಡಿಯೋದಲ್ಲಿ ಮಹಿಳೆ ರಸ್ತೆ ದಾಟುತ್ತಿರುವ ವೇಳೆ ಬಸ್ ನಿಲ್ದಾಣಕ್ಕೆ ತಿರುವು ಪಡೆದ ಚಾಲಕ ಎದುರಿಗೆ ಹೋಗುತ್ತಿದ್ದ ಮಹಿಳೆಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾನೆ ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಮಹಿಳೆಯ ಕಾಲಿನ ಮೇಲೆ ಬಸ್ಸಿನ ಚಕ್ರ ಹರಿದಿದೆ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿಯಾದ ಚಂದ್ರಾಬಾಯಿ ಎನ್ನಲಾಗಿದೆ.

ಮಹಿಳೆ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ, ಭದ್ರಾವತಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Students ದುರಂತ ಅಂತ್ಯ; ಶಾಸಕ ಡಾ.ಭರತ್ ದಿಗ್ಬ್ರಮೆ, ಶವಾಗಾರದಲ್ಲಿ ಕುಟುಂಬಸ್ಥರ ಆಕ್ರಂದನ

Advertisement
Advertisement

Udayavani is now on Telegram. Click here to join our channel and stay updated with the latest news.

Next