Advertisement
ಸರಕಾರಿ ಬಸ್ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡು ಬಂದಿದೆ. ಬಸ್ ನಿಲ್ದಾಣದಲ್ಲಿ ಬಸ್‌ಗಳು ನಿಂತಲ್ಲೇ ಇದ್ದು, ಕೆಲ ಪ್ರಯಾಣಿಕರು ಬಸ್ ಹೊರುಡುವುದನ್ನೇ ನಿರೀಕ್ಷಿಸುತ್ತಿರುವ ದೃಶ್ಯ ಕಂಡು ಬಂದಿದೆ. ಕೆಲ ಕಾರ್ಮಿಕರು ಊರಿಗೆ ತೆರಳಲು ಸಾಧ್ಯವಾಗದೆ ಪರಿತಪಿಸುತ್ತಿದ್ದರೆ, ಬೇರೆ ಊರುಗಳಿಂದ ಬಂದ ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ.
Related Articles
Advertisement
ಇದನ್ನೂ ಓದಿ: ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಸರಕಾರಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿರುವುದರಿಂದ ಬೆಳಗ್ಗಿನಿಂದಲೇ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿ ಖಾಸಗಿ ಟೂರಿಸ್ಟ್ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡುತ್ತಿವೆ. ಕಾವು, ಈಶ್ವರಮಂಗಲ, ಉಪ್ಪಿನಂಗಡಿ, ಮಂಗಳೂರು, ವಿಟ್ಲ, ಪಾಣಾಜೆ ಕಡೆಗಳಿಗೆ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ. ವಿಟ್ಲ ಕಡೆ ಟೂರಿಸ್ಟ್ ಕಾರುಗಳು ಬಾಡಿಗೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಸಹಕಾರ ನೀಡುತ್ತಿವೆ.