Advertisement

KSRTC ಸಾರಿಗೆ ಸಿಬಂದಿಗೆ ಪರಿಹಾರ 3 ಪಟ್ಟು

12:03 AM Oct 31, 2023 | Team Udayavani |

ಬೆಂಗಳೂರು: ಸೇವೆಯಲ್ಲಿರುವಾಗಲೇ ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈಗ, ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.

Advertisement

ನವೆಂಬರ್‌ 1ರಿಂದಲೇ ಇದು ಅನ್ವಯ ಆಗಲಿದೆ. ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್‌, ಪಾರ್ಶ್ವವಾಯು, ಹೃದಯಾಘಾತ, ಮೂತ್ರಪಿಂಡ ವೈಫ‌ಲ್ಯ ಸಹಿತ ಇತರ ಕಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಇಂಥ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ಈ ಮೊದಲು ನೀಡುತ್ತಿದ್ದ 3 ಲಕ್ಷ ರೂ. ಪರಿಹಾರ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸಲಾಗುತ್ತಿದೆ.

ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂ.ಗಳಿಂದ 200 ರೂ.ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು 100 ರೂ.ಗಳಿಗೆ ಪರಿಷ್ಕರಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next