Advertisement

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

11:49 PM Oct 27, 2021 | Team Udayavani |

ಬೆಂಗಳೂರು: ಮುಷ್ಕರದಲ್ಲಿ ಭಾಗವಹಿಸಿದ ಸಾರಿಗೆ ನೌಕರರನ್ನು ವಜಾ ಮಾಡಿರುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರದಿಂದ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿಲಾಗಿದೆ.

Advertisement

ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೂ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳುವುದಾಗಿ ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ತಿಂಗಳಾದರೂ ಭರವಸೆ ಈಡೇರಿಸಿಲ್ಲ. ಈಗ ಹಲವು ನೆಪವೊಡ್ಡಿ ಮತ್ತೆ 57 ನೌಕರರನ್ನು ವಜಾ ಮಾಡಲಾಗಿದೆ. ಸಾರಿಗೆ ನೌಕರರ ಮೇಲೆ ಸರಕಾರ ಸೇಡಿನ ಕ್ರಮ ಅನುಸರಿಸುತ್ತಿದೆ. ಕೂಡಲೇ ಈ ಧೋರಣೆ ಕೈಬಿಟ್ಟು, ವಜಾ ಮಾಡಿರುವ ಆದೇಶ ಹಿಂಪಡೆಯಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಚ್‌.ಡಿ. ರೇವಣ್ಣ, ಕಳೆದ ಎಪ್ರಿಲ್‌ನಲ್ಲಿ ಮುಷ್ಕರ ನಡೆಸಿದ್ದರಿಂದ 2,200ಕ್ಕೂ ಅಧಿಕ ನೌಕರರನ್ನು ವರ್ಗಾವಣೆ, ಅಮಾನತು, ವಜಾ ಮಾಡಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದಾಗ ಸೆ. 21ರಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ನೌಕರರು ಮತ್ತು ಅಧಿಕಾರಿಗಳ ಸಭೆ ನಡೆಸಿ ವಜಾಗೊಳಿಸಿರುವ ನೌಕರರನ್ನು ವಾಪಸ್‌ ಕೆಲಸಕ್ಕೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next