Advertisement

ಕೋವಿಡ್‌ ಜಾಗೃತಿಗೆ ಕೆಎಸ್ಸಾರ್ಟಿಸಿ ಸಾಥ್‌

01:23 AM Dec 13, 2021 | Team Udayavani |

ಉಡುಪಿ: ಕೋವಿಡ್‌-19 ಲಸಿಕೆಯ 1 ಹಾಗೂ 2ನೇ ಡೋಸ್‌ ವಿತರಣೆಯಲ್ಲಿ ಶೇ. 100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಕೆಎಸ್ಸಾರ್ಟಿಸಿ ಕೈಜೋಡಿಸಿದೆ.

Advertisement

ರಾಜ್ಯದಲ್ಲಿ ಓಡಾಡುವ ಕೆಎಸ್ಸಾರ್ಟಿಸಿ ಬಸ್‌ಗಳ ಟಿಕೆಟ್‌ಗಳಲ್ಲಿ ಕಡ್ಡಾಯವಾಗಿ 2 ಡೋಸ್‌ ಲಸಿಕೆ ಹಾಕಿಕೊಳ್ಳಬೇಕು, ಮಾಸ್ಕ್ ಹಾಕಿಕೊಳ್ಳಬೇಕು ಎಂಬ ಬರಹಗಳನ್ನು ಮುದ್ರಿಸಲಾಗಿದೆ. ಈ ಮುಖಾಂತರ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜನರಲ್ಲಿ ಕೋವಿಡ್‌ -19ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರಿಗೆ ಇಲಾಖೆಯ ಕಾರ್ಯವನ್ನು ಜಿಲ್ಲಾಧಿಕಾರಿಗಳು ಶ್ಲಾಘಿ ಸಿದ್ದಾರೆ.

ಇದೇ ರೀತಿಯಲ್ಲಿ ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್‌-19ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್‌ಗ‌ಳಲ್ಲಿ, ಸಿನೆಮಾ ಮಂದಿರಗಳಲ್ಲಿ ಮತ್ತು ಎಲ್ಲ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next