Advertisement

ಸಾರಿಗೆ ಮುಷ್ಕರ: 9 ಸಿಬ್ಬಂದಿ ಅಮಾನತು

09:01 PM Dec 18, 2020 | mahesh |

ಕಲಬುರಗಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ ಗಳನ್ನು ಜಖಂಗೊಳಿಸಿದ ಆರೋಪದಡಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಂಭತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Advertisement

ಈಶಾನ್ಯ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಬೀದರ ವಿಭಾಗದ ಐವರು, ಕೊಪ್ಪಳ ವಿಭಾಗದ ಇಬ್ಬರು, ಬಳ್ಳಾರಿ ಹಾಗೂ ವಿಜಯಪುರ ವಿಭಾಗದ ತಲಾ ಓರ್ವ ಸಿಬ್ಬಂದಿ ಒಟ್ಟು 9 ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಗಳಲ್ಲಿ ಭಾಗಿಯಾದ ಬಗ್ಗೆ ಎಫ್‍ಐಆರ್ ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಅಮಾನತುಗೊಳಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

ಮುಷ್ಕರ ಸಮಯದ 4 ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನು ಯಾವುದೇ ನಿರ್ಧಾರ ಕೈಗೊಂಡಿರುವುದಿಲ್ಲ. ಈ 4 ದಿನಗಳ ವೇತನ ಪಾವತಿ ಕಡಿತದ ಬಗ್ಗೆ ಮಂಡಳಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next