Advertisement

Cong candidate; ”ಚನ್ನಪಟ್ಟಣದಲ್ಲಿ ಅಭ್ಯರ್ಥಿ ನಾನೇ” ಎಂದ ಡಿ.ಕೆ.ಶಿವಕುಮಾರ್

09:13 PM Aug 15, 2024 | Team Udayavani |

ಬೆಂಗಳೂರು: ”ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾನೇ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಆಗಸ್ಟ್ 15) ಹೇಳಿದ್ದಾರೆ.

Advertisement

ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ‘ನಾನೇ ಅಭ್ಯರ್ಥಿ’ ಎಂದು ಹೆಚ್ಚಿನ ವಿವರಣೆ ನೀಡಿಲ್ಲ.’ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅಭ್ಯರ್ಥಿ ನಾನೇ’ ಎಂದು ಈ ಹಿಂದೆಯೂ ಶಿವಕುಮಾರ್ ಹೇಳಿದ್ದರು.

ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಜಕೀಯ ರಂಗೇರುವಂತೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಆಗಿರುವ ಶಿವಕುಮಾರ್ ಅವರು ಚನ್ನಪಟ್ಟಣವನ್ನು ಪ್ರತಿನಿಧಿಸುವ ಶಾಸಕರಲ್ಲ, ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಅಲ್ಲವಾದರೂ ಧ್ವಜಾರೋಹಣ ಮಾಡಿ ತೀವ್ರ ಚರ್ಚೆ ಹುಟ್ಟು ಹಾಕಿದ್ದಾರೆ.

ಶಿವಕುಮಾರ್ ಅವರು ಪಕ್ಕದ ಕನಕಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಲೋಕಸಭೆಗೆ ಆಯ್ಕೆಯಾದ ನಂತರ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ವೇಳಾಪಟ್ಟಿಯನ್ನು ಚುನಾವಣ ಆಯೋಗ ಇನ್ನಷ್ಟೇ ಪ್ರಕಟಿಸಬೇಕಿದೆ.

Advertisement

ಸಿ.ಪಿ.ಯೋಗೇಶ್ವರ್ ಭೇಟಿ: ತೀವ್ರ ಕೂತೂಹಲ!
ಎನ್ ಡಿಎ ಅಭ್ಯರ್ಥಿಯಾಗಲು ತುದಿಗಾಲಲ್ಲಿ ನಿಂತಿರುವ ಬಿಜೆಪಿ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗಿಯಾಗಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಒಂದೆಡೆ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ. ಎನ್ ಡಿಎ ಅಭ್ಯರ್ಥಿಯಾಗಿ ಪರಿಗಣಿಸದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next