Advertisement

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

08:22 PM May 12, 2024 | Team Udayavani |

ಬೆಂಗಳೂರು: ರಾಜ್ಯದ ಹಲವೆಡೆ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಮೇ 15 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ತಮ್ಮ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಒತ್ತಾಯಿಸಿದ್ದಾರೆ.

Advertisement

ತಮ್ಮ ಜನ್ಮದಿನದಂದು ಉತ್ತರ ಭಾರತದಲ್ಲಿ ಲೋಕಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಮತ್ತು ಅವುಗಳಲ್ಲಿ 196 ಅನ್ನು ತೀವ್ರ ಬರ ಪೀಡಿತ ಎಂದು ವರ್ಗೀಕರಿಸಲಾಗಿದೆ. ರಾಜ್ಯದ ಕೆಲವೆಡೆ ಮಳೆ ಸುರಿಯುತ್ತಿದ್ದು ಕೊಂಚ ಸಮಾಧಾನ ತಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next