Advertisement

Corruption; ಚಲುವರಾಯಸ್ವಾಮಿ ಕುರಿತು ವಂದಿತಾ ಶರ್ಮಾ ರಿಗೆ ರಾಜ್ಯಪಾಲರ ಪತ್ರ

05:32 PM Aug 07, 2023 | Team Udayavani |

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ವಿಶ್ವಾಸಾರ್ಹ ಮೂಲಗಳ ಪ್ರಕಾರ ಸೋಮವಾರ ಈ ಆರೋಪ ಹೊರಬಿದ್ದಿದೆ.ಸದ್ಯಕ್ಕೆ ಈ ಬೆಳವಣಿಗೆಯನ್ನು ಸರಕಾರ ಮತ್ತು ರಾಜ್ಯಪಾಲರ ಕಚೇರಿ ಅಧಿಕೃತವಾಗಿ ದೃಢಪಡಿಸಿಲ್ಲ.

Advertisement

ಹಿರಿಯ ಅಧಿಕಾರಿಗಳ ಮೂಲಕ ಸಚಿವರು 6ರಿಂದ 8 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆಯ ಅಧಿಕಾರಿಗಳ ಗುಂಪು ರಾಜ್ಯಪಾಲರಿಗೆ ದೂರು ನೀಡಿ ಇದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ. ತಮ್ಮ ಸಮಸ್ಯೆ ಬಗೆಹರಿಸದಿದ್ದರೆ ವಿಷ ಸೇವಿಸಿ ಕುಟುಂಬ ಸಮೇತ ಸಾಯುವುದಾಗಿ ರಾಜ್ಯಪಾಲರಿಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.ಕೃಷಿ ಇಲಾಖೆಯ ಏಳು ಸಹಾಯಕ ನಿರ್ದೇಶಕರು ದೂರು ನೀಡಿದ್ದು, ಎಲ್ಲರೂ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಇಂತಹ ಯಾವುದೇ ಬೆಳವಣಿಗೆಯ ಬಗ್ಗೆ ತಮ್ಮ ಇಲಾಖೆಗೆ ಯಾವುದೇ ಸುದ್ದಿ ಬಂದಿಲ್ಲ ಮತ್ತು ಈ ಸಂಬಂಧ ಮಾಧ್ಯಮಗಳಲ್ಲಿ ನಕಲಿ ಪತ್ರವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯಪಾಲರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣದ ಸತ್ಯಾಸತ್ಯತೆಗಳ ತನಿಖೆ ನಡೆಸುವಂತೆ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. “ಮೊದಲು ವರದಿ ಬರಲಿ ಮತ್ತು ನಂತರ ನಾನು ಅದಕ್ಕೆ ಪ್ರತಿಕ್ರಿಯಿಸುತ್ತೇನೆ. ಜನರು ಹಗಲು ರಾತ್ರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಮತ್ತು ಅವರು ತಮ್ಮ ಕೆಲಸವನ್ನು ಮುಂದುವರಿಸಲಿ, ನಾನು ಚಿಂತಿಸುವುದಿಲ್ಲ, ”ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next