Advertisement

K’taka hijab ban ಪರೀಕ್ಷೆಗೆ ಹಿಜಾಬ್:ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಹೇಳಿದ ಸುಪ್ರೀಂ

03:24 PM Mar 03, 2023 | Team Udayavani |

ನವದೆಹಲಿ : ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಆಲಿಸಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

Advertisement

ಪರೀಕ್ಷೆಗಳು ನಡೆಯುತ್ತಿರುವುದರಿಂದ ಸರಕಾರಿ ಶಾಲೆ, ಕಾಲೇಜ್ ಗಳು ಸ್ಕಾರ್ಫ್ ಧರಿಸಲು ಅನುಮತಿ ನೀಡದ ಕಾರಣ ಹುಡುಗಿಯರು ಮತ್ತೊಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಅಂಚಿನಲ್ಲಿದ್ದಾರೆ ಎಂದು ಮಹಿಳಾ ವಕೀಲರು ಅರ್ಜಿಯ ತುರ್ತು ವಿಚಾರಣೆಯನ್ನು ಕೋರಿದಾಗ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನು ಒಳಗೊಂಡ ಪೀಠವು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಹೇಳಿದೆ.

ಆರಂಭದಲ್ಲಿ, ಸಿಜೆಐ ಈ ವಿಷಯವನ್ನು ಹೋಳಿ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದರು. ಐದು ದಿನಗಳ ನಂತರ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ವಕೀಲರು ಹೇಳಿ, ಅವರು ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ. ಇನ್ನೊಂದು ವರ್ಷವನ್ನು ಕಳೆದುಕೊಳ್ಳುತ್ತಾರೆ ಎಂದರು. ರಜೆಯ ಹಿಂದಿನ ಕೊನೆಯ ದಿನದಂದು ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ಪೀಠವು ತಿಳಿಸಿದಾಗ, ಈ ಹಿಂದೆ ಎರಡು ಬಾರಿ ಪ್ರಸ್ತಾಪಿಸಲಾಗಿದೆ ಎಂದು ವಕೀಲರು ಹೇಳಿದರು.

ದಿನಾಂಕವನ್ನು ನಿರ್ದಿಷ್ಟಪಡಿಸದೆ, ಪೀಠವು ಪೀಠವನ್ನು ರಚಿಸುವುದಾಗಿ ಹೇಳಿದೆ. ಈ ವಿಷಯವನ್ನು ಕೊನೆಯದಾಗಿ ವಿದ್ಯಾರ್ಥಿಗಳ ಪರವಾಗಿ ವಕೀಲ ಶದನ್ ಫರಾಸತ್ ಅವರು ತುರ್ತು ವಿಚಾರಣೆಗೆ ಪ್ರಸ್ತಾಪಿಸಿದರು. ಕರ್ನಾಟಕ ಸರಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಪಟ್ಟಿ ಮಾಡುವುದಾಗಿ ನ್ಯಾಯಾಲಯ ಹೇಳಿತ್ತು.

ಮಾರ್ಚ್‌ 9 ರಿಂದ ಆರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್‌ ಧರಿಸಿ ಹಾಜರಾಗಲು ಅನುಮತಿ ಕೋರಿ ಬರುವ ಅರ್ಜಿಗಳನ್ನು ತಿರಸ್ಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next