Advertisement
ನಿಯಮಿತವಾಗಿ ಆಫ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಅವರು ಹೇಳಿದ್ದಾರೆ.
Related Articles
Advertisement
ಕೋವಿಡ್ ಪರಿಸ್ಥಿತಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಕಂಡುಬಂದಲ್ಲಿ ಶಿಕ್ಷಣ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಪೋಷಕರಿಗೆ ಸ್ಪಷ್ಟನೆ ನೀಡಿದರು.
ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ , ನವೋದಯ ಶಾಲೆಗಳಲ್ಲಿ, 1-10 ಸರಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ತಗುಲಿದೆ.ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಇರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ.ನಾನು ನಾಳೆ, ನಾಡಿದ್ದು, ನೀತಿ ಸಂಹಿತೆ ಮುಗಿದ ಬಳಿಕ ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ವಸತಿ ಶಾಲೆಗಳಲ್ಲಿ ಎಸ್.ಓ.ಪಿ ಪಾಲನೆ ಆಗುತ್ತಿದೆಯೇ ಇಲ್ಲವಾ ಸ್ವತಃ ಡಿಸಿಗಳೇ ಪರಿಶೀಲಿಸಲು ಹೇಳಿದ್ದೇನೆ ಎಂದರು.