Advertisement
ಬಾಗಲಕೋಟೆ ಜಿಲ್ಲಾ ಖಜಾನೆಯಲ್ಲಿ ವರ್ಷವಿಡಿ ಭದ್ರತೆಯಲ್ಲಿರುವ ಸಂಗಮೇಶ್ವರ ಬಂಗಾರ ಕಳಸವು ಜಾತ್ರೆಯ ನಿಮಿತ್ತ 3 ದಿನ ಮಾತ್ರ ಭಕ್ತರ ದರ್ಶನಕ್ಕೆ ದೊರೆಯುವುದು. ಉಳಿದ ಅವ ಧಿಯಲ್ಲಿ ಜಿಲ್ಲಾ ಖಜಾನೆಯ ಭದ್ರತೆಯಲ್ಲಿ ಇರುವುದು. ಸೋಮವಾರ ಬೆಳಗ್ಗೆ 9:30ಕ್ಕೆ ಬಾಗಲಕೊಟೆ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕಳಸದ ಬಾಬುದಾರರು 72 ಗಂಟೆಯಲ್ಲಿ ಕಳಸ ಮರಳಿ ತಲುಪಿಸುತ್ತೇವೆ ಎಂಬ ಷರತ್ತುಬದ್ದ ಮುಚ್ಚಳಿಕೆ ಪತ್ರಕೊಟ್ಟು ಪೊಲೀಸ್ ಭದ್ರತೆಯಲ್ಲಿ ರಾತ್ರಿ ಇಡೀ ಪಾದಯಾತ್ರೆಯ ಮೂಲಕ ಹಳೆಮಲ್ಲಾಪುರ, ಕಿರಸೂರ, ಭಗವತಿ , ಹಳ್ಳೂರ, ಬೇವೂರ ಮಾರ್ಗದ ಮೂಲಕ ಗುರುವಾರ ಬೆಳಗ್ಗೆಕೂಡಲಸಂಗಮಕ್ಕೆ ಆಗಮಿಸಿತು.
ಕಳುಹಿಸಿದರು. ಮಾರ್ಗದುದ್ದಕ್ಕೂ ಅನೇಕ ಭಕ್ತರು ಪ್ರಸಾದ, ತಂಪು ಪಾನಿಯ, ಹಣ್ಣುಗಳನ್ನು ವಿತರಿಸಿದರು. ಪಾದಯಾತ್ರೆಯಲ್ಲಿ ಸುಮಾರು 16 ಸಾವಿರಕ್ಕೂ ಅ ಕ ಪುರುಷರು, 4 ಸಾವಿರಕ್ಕೂ ಅಧಿ ಕ ಮಹಿಳೆಯರು ಇದ್ದರು. 9 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸುತ್ತಿದ್ದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಕಲಾ ತಂಡಗಳು ನೃತ್ಯ ಪ್ರದರ್ಶನ ಮಾಡುತ್ತ ಸಂಗಮೇಶ್ವರ ದೇವಾಲಯಕ್ಕೆ ಆಗಮಿಸಿದರು. ವಿವಿಧ ಗ್ರಾಮದ ಮಹಿಳೆಯರು ಆರತಿಯೊಂದಿಗೆ ಕಳಸದ ಹಿಂದೆ ಸಂಗಮನಾಥನ ದೇವಾಲಯದಲ್ಲಿ ಐದು ಸುತ್ತು ಪ್ರದಕ್ಷಿಣೆ ಹಾಕಿ ಸಂಗಮೇಶ್ವರ ದೇವಾಲಯದ ಮುಂದೆ ಪೂಜೆ ಸಲ್ಲಿಸಿ ದೇವಾಲಯದಿಂದ ಬಸವೇಶ್ವರ ವೃತ್ತದ ಮೂಲಕ ಗ್ರಾಮದ ಕಳಸದ ಕಟ್ಟೆಯವರೆಗೆ ಮೆರವಣಿಗೆಯ ಮೂಲಕ ತಂದರು. ನಂತರ ಗ್ರಾಮಸ್ಥರು ಕಳಸಕ್ಕೆ ದೀಡ್ ನಮಸ್ಕಾರ ಹಾಕಿದರು.