Advertisement

ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ: ಕುಡತಿನಿ ಶ್ರೀನಿವಾಸ್

11:49 AM Aug 12, 2020 | sudhir |

ಬಳ್ಳಾರಿ:ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಕುಡತಿನಿ ಶ್ರೀನಿವಾಸ್ ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿಯವರು 10 ಸಾವಿರ ಬೆಡ್ ಗಳನ್ನು ಪೂರೈಕೆ ಮಾಡಬೇಕೆಂದು ಜಿಂದಾಲ್ ಸಂಸ್ಥೆಗೆ ಗಡುವು ನೀಡಿದ್ದಾರೆ. ಆಡಳಿತ ಪಕ್ಷದ ಶಾಸಕರಾಗಿದ್ದುಕೊಂಡು ಈ ರೀತಿ ಹೇಳಿಕೆ ನೀಡುವುದು ನಾಚಿಕೆಗೇಡು. ಶಾಸಕರು ಜಿಂದಾಲ್ ಗೆ ಗಡುವು ನೀಡುವುದಲ್ಲ. ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಶಾಸಕರು ಮೊದಲು ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಗಡುವು ನೀಡಿ ಬಂದು ಧರಣಿ ನಡೆಸಲಿ. ಅದಕ್ಕೆ ನಾವೆಲ್ಲರೂ ಪಕ್ಷ ಬೇಧ ಮರೆತು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಜಿಲ್ಲೆಯ ವಿಮ್ಸ್, ಜಿಲ್ಲಾಸ್ಪತ್ರೆ, ಟ್ರೊಮಾ ಕೇರ್ ಸೆಂಟರ್ ಹೊರತುಪಡಿಸಿ ಎಲ್ಲ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯಾಗಿದೆ. ವೆಂಟಿಲೇಟರ್ ಗಳು ಸಹ ದೊರೆಯುತ್ತಿಲ್ಲ. ಎರಡು ದಿನಗಳ ಹಿಂದೆ ವೆಂಟಿಲೇಟರ್ ದೊರೆಯದೆ ಮಗುವೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ ಇದೇ ಆ.17 ರಂದು ಒಂದು ದಿನದ ಮಟ್ಟಿಗೆ ಉಪವಾಸ ನಡೆಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next