Advertisement

ರಾಜೀನಾಮೆ ನೀಡಿದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ

12:49 PM Mar 31, 2023 | Team Udayavani |

ಬಳ್ಳಾರಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಶಿರಸಿಯಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸಕ್ಕೆ ತೆರಳಿದ ಗೋಪಾಲಕೃಷ್ಣ ಅವರು, ಕಾಗೇರಿ ಅವರಿಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಇದನ್ನೂ ಓದಿ:ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಈ ಹಿಂದೆ ಮೊಳಕಾಲ್ಮುರು ಕ್ಷೇತ್ರದಿಂದ ನಾಲ್ಕು ಬಾರಿ, ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ ಬಿಜೆಪಿ ಸೇರಿ ಕೂಡ್ಲಿಗಿ‌ ಶಾಸಕರಾಗಿದ್ದರು.

ಈ ಬಾರಿ ವಯಸ್ಸಿನ ಕಾರಣ ಬಿಜೆಪಿ ಟಿಕೆಟ್ ನೀಡಲ್ಲ ಎಂದು ಬಿಜೆಪಿಗೆ ರಾಜೀನಾಮೆ ನೀಡಿ, ಮತ್ತೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next