Advertisement

ಜೂ. 1ರಿಂದ ಕುದ್ರೋಳಿಯಲ್ಲಿ ದೇವರ ದರ್ಶನಕ್ಕೆ ಅವಕಾಶ

11:37 PM May 29, 2020 | Sriram |

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಲಾಕ್‌ಡೌನ್‌ನಿಂದಾಗಿ ದೇವರ ದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಹಿಂಪಡೆಯಲಾಗಿದೆ.

Advertisement

ಅದರಂತೆ ಜೂ. 1ರಿಂದ ಕ್ಷೇತ್ರದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್‌. ಎಸ್‌. ಸಾಯಿರಾಮ್‌ ತಿಳಿಸಿದ್ದಾರೆ. ಸರಕಾರದ ಮಾರ್ಗಸೂಚಿಯಂತೆ ಭಕ್ತರು ದೇವರ ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ.

ಜೂ. 1ರಂದು ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ವಿಶೇಷ ಹವನ, ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next