Advertisement

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕುಡುಗೋಲಿನಿಂದ ಕತ್ತು ಕುಯ್ದು ಹತ್ಯೆ

05:00 PM Dec 02, 2020 | keerthan |

ಮಂಡ್ಯ: ಅತ್ಯಾಚಾರಕ್ಕೆ ಒಪ್ಪದ ಅಪ್ರಾಪ್ತ ಬಾಲಕಿಯ ಕತ್ತು ಕುಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಹುರುಗಲವಾಡಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಬಳ್ಳಾರಿ ಮೂಲಕ ಆರತಿ (12) ಕೊಲೆಯಾದ ಬಾಲಕಿ. ಘಟನೆ ಹಿನ್ನೆಲೆಯಲ್ಲಿ ಅನುಮಾನಾಸ್ಪದವಾಗಿ ಅದೇ ಗ್ರಾಮದ ಯುವಕನೊಬ್ಬನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಬಾಲಕಿ ಕುಟುಂಬಸ್ಥರೊಂದಿಗೆ ಕಬ್ಬು ಕಟಾವು ಮಾಡಲು ಬಳ್ಳಾರಿಯಿಂದ ಬಂದಿದ್ದರು. ಕಬ್ಬು ಕಟಾವು ಮಾಡುವಾಗ ದುಷ್ಕರ್ಮಿಗಳು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದಿದ್ದಕ್ಕೆ ಕಬ್ಬು ಕಡಿಯುವ ಕುಡುಗೋಲಿನಿಂದ ಕತ್ತು ಕುಯ್ದು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಘಟನೆಯ ಮಾಹಿತಿ ಕಲೆ ಹಾಕುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next