Advertisement

ಕುಕ್ಕಾವು: ಮನೆ ಮಹಡಿಯಿಂದ ಬಿದ್ದು ಸಾವು

11:56 PM Apr 29, 2023 | Team Udayavani |

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಮನೆಯೊಂದರ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟ ಘಟನೆ ನಡೆದಿದೆ.

Advertisement

ಮಿತ್ತಬಾಗಿಲು ಗ್ರಾಮದ ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್‌ (30) ಮೃತಪಟ್ಟವರು.

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಹರೀಶ್‌ ಎ. 21ರಂದು ನಾರಾಯಣ ಕುಂಬಾರ ಎಂಬವರಿಗೆ ಸೇರಿದ ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಎ.28 ರಂದು ಮೃತಪಟ್ಟರು. ಮೃತರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಮಗುವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next