Advertisement
ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕುಕ್ಕೆ ಸುಬ್ರಹ್ಮಣ್ಯ ಗುರುತಿಸಿಕೊಂಡಿತ್ತು. ಕಡಬ ನೂತನ ತಾ.ಆದ ಬಳಿಕ ಇದೇ ಮೊದಲ ಬಾರಿಗೆ ಕಡಬ ತಾ. ಸೇರಿದ ಕುಕ್ಕೆಯಲ್ಲಿ ಚೊಚ್ಚಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. 22ನೇ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇದಾಗಿದ್ದು 21 ವರ್ಷಗಳ ಬಳಿಕ ಮೊದಲ ಬಾರಿಗೆ ಮಹಿಳೆಯೊಬ್ಬರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿದ್ದಾರೆ. ಲೇಖಕಿ ಎ.ಎಲ್ ಮಾಲತಿ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರಲಿದ್ದಾರೆ.