Advertisement
ಸರಕಾರದ ಮಾರ್ಗಸೂಚಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 25,462 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 20,219 ಮಂದಿಗೆ ಲಸಿಕೆ ನೀಡಲಾಗಿದ್ದು 15,784 ಮಂದಿಗೆ ಮೊದಲ ಮತ್ತು 4,435 ಮಂದಿಗೆ
ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನ ನಡೆಯುತ್ತಿದ್ದು, ಜ. 7ರಂದು 14,676 ಮಂದಿ ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಈವರೆಗೆ ಒಟ್ಟು 84,545 ಮಂದಿ ಮಕ್ಕಳು ಲಸಿಕೆ ಪಡೆದಿದ್ದಾರೆ.
Related Articles
Advertisement