Advertisement

ಭಕ್ತಾದಿಗಳ ಗಮನಕ್ಕೆ; ಕುಕ್ಕೆ, ಧರ್ಮಸ್ಥಳ- ಇಂದು, ನಾಳೆ ದೇವರ ದರ್ಶನವಿಲ್ಲ

10:36 AM Jan 08, 2022 | Team Udayavani |

ಸುಬ್ರಹ್ಮಣ್ಯ/ಬೆಳ್ತಂಗಡಿ. 7: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಸರಕಾರ ಕೈಗೊಂಡಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ (ಜ.08) ಮತ್ತು ರವಿವಾರ (ಜ.09) ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ.

Advertisement

ಸರಕಾರದ ಮಾರ್ಗಸೂಚಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮುಂದಿನ ಆದೇಶದ ವರೆಗೆ ಆನ್‌ಲೈನ್‌ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

25,462 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 25,462 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 20,219 ಮಂದಿಗೆ ಲಸಿಕೆ ನೀಡಲಾಗಿದ್ದು 15,784 ಮಂದಿಗೆ ಮೊದಲ ಮತ್ತು 4,435 ಮಂದಿಗೆ
ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನ ನಡೆಯುತ್ತಿದ್ದು, ಜ. 7ರಂದು 14,676 ಮಂದಿ ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಈವರೆಗೆ ಒಟ್ಟು 84,545 ಮಂದಿ ಮಕ್ಕಳು ಲಸಿಕೆ ಪಡೆದಿದ್ದಾರೆ.

ಉಡುಪಿ: 5,243 ಮಂದಿಗೆ ಲಸಿಕೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 5,243 ಮಂದಿಗೆ ಲಸಿಕೆ ಹಾಕಲಾಗಿದ್ದು 3,048 ಮಂದಿ ಮೊದಲ ಹಾಗೂ 2,195 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಜ. 3ರಿಂದ ಇಲ್ಲಿಯವರೆಗೆ ಶೇ. 59.5 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next