Advertisement

ಕುಕ್ಕೆ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಂಬಯಿ ಕನ್ನಡಿಗರು

05:29 PM Mar 04, 2018 | |

ಮುಂಬಯಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಶಿವರಾವ್‌ ಸಭಾಂಗಣದ ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆಯಲ್ಲಿ ಮಾ. 5ರಿಂದ ಮಾ. 7 ರವರೆಗೆ ಜರಗಲಿವೆ.

Advertisement

ಕುಕ್ಕೆ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ತಾಯಿ ಭುವನೇಶ್ವರಿಯ ದಿಬ್ಬಣಕ್ಕೆ ಜಿಲ್ಲಾ ಪಂಚಾಯತ್‌ ಸದಸ್ಯೆ ಆಶಾ ತಿಮ್ಮಪ್ಪ ಗೌಡ ಇವರು ಚಾಲನೆ ನೀಡಲಿದ್ದಾರೆ. ಸಮ್ಮೇಳನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌. ಜಿ. ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಎ. ಪಿ. ಮಾಲತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ವಿಕಾಸ, ತೌಳವ ಚಿಂತನೆ, ಮಹಿಳಾ ಗೋಷ್ಠಿ, ಯುವ ಕವಿಗೋಷ್ಠಿ, ಯಕ್ಷಗಾನ ತಾಳಮದ್ದಳೆ, ಸಂವಾದ, ಸಾಧಕರಿಗೆ ಸಮ್ಮಾನ, ಹೊರನಾಡಿನಲ್ಲಿ ಕನ್ನಡದ ಅನುಷ್ಠಾನ, ಬಹಿರಂಗ ಅಧಿವೇಶನ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

ಸಮ್ಮೇಳನದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟÅ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಇವರು ಹೊರನಾಡಿನಲ್ಲಿ ಕನ್ನಡ ಅನುಷ್ಠಾನ ಗೋಷ್ಠಿಯಲ್ಲಿ ವಿಚಾರ ಮಂಡಿಸಲಿದ್ದಾರೆ. ಮಹಾರಾಷ್ಟÅ ಕನ್ನಡಿಗ ಕಲಾವಿದರ ಪರಿಷತ್ತು ಅಧ್ಯಕ್ಷ, ರಂಗಕರ್ಮಿ, ಸಂಘಟಕ ಸುರೇಂದ್ರ ಕುಮಾರ್‌ ಹೆಗ್ಡೆ, ವಿರಾರ್‌ ಕರ್ನಾಟಕ ಸಂಘದ ಅಧ್ಯಕ್ಷ ವಿರಾರ್‌ ಶಂಕರ್‌ ಶೆಟ್ಟಿ ಇವರು ಗೋಷ್ಠಿಯಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಧಕರಿಗೆ ಸಮ್ಮಾನ 
ಸಾಧಕರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಸಂಘಟಕ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ  ಇವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಹೊರನಾಡ ಸೇವೆಗಾಗಿ ಮುಂಬಯಿಯ ಪ್ರಸಿದ್ಧ ವೈದ್ಯ, ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ರಾವ್‌, ಕನ್ನಡ ಕಲಾಕೇಂದ್ರ ಮುಂಬಯಿ ಅಧ್ಯಕ್ಷ ಬಿ. ಬಾಲಚಂದ್ರ ರಾವ್‌ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next