Advertisement

Kukke Shree Subrahmanya: ನಾಣ್ಯದಲ್ಲಿ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್‌.ವೈ.

12:32 AM Jun 25, 2024 | Team Udayavani |

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಭೇಟಿ ನೀಡಿದರು.

Advertisement

ಅವರನ್ನು ದೇವಸ್ಥಾನದ ವತಿಯಿಂದ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್‌.ಅಂಗಾರ ಸಹಿತ ಪಕ್ಷದ ಪ್ರಮುಖರು ಹೂಗುತ್ಛ ನೀಡಿ ಸ್ವಾಗತಿಸಿದರು.

ಯಡಿಯೂರಪ್ಪ ಅವರು 130 ಕೆ.ಜಿ. ನಾಣ್ಯದಲ್ಲಿ ದೇವರಿಗೆ ತುಲಾಭಾರ ಸೇವೆ ಮಾಡಿದರು. ಬಳಿಕ
ದೇವರಿಗೆ ಮಹಾಭಿಷೇಕ ಸೇವೆ ಸಲ್ಲಿಸಿ ಮಧ್ಯಾಹ್ನದ ಮಹಾಪೂಜೆ ನೆರವೇರಿಸಿದರು.

ಪೂಜೆಯ ಬಳಿಕ ದೇವಸ್ಥಾನ ಪ್ರಧಾನ ಅರ್ಚಕ ರಮೇಶ್‌ ಆಸ್ರಣ್ಣ ಅವರು ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಹರಸಿದರು. ನರಸಿಂಹ ಸ್ವಾಮಿ ದರುಶನ ಮತ್ತು ಹೊಸಳಿಗಮ್ಮ ಗುಡಿಯ ಪೂಜೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ದೇಗುಲದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಗೋವಿಂದ್‌ ನಾಯಕ್‌,ಸಹಾಯಕ ಕಾರ್ಯನಿರ್ವಹಣಾಧಿ ಕಾರಿ ಏಸುರಾಜ್‌, ಬಿಜೆಪಿ ಜಿಲ್ಲಾಧ್ಯಕ್ಷಸತೀಶ್‌ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರಾದ ರವೀಂದ್ರ ಶೆಟ್ಟಿ, ರಾಕೇಶ್‌ ರೈ ಕೆಡೆಂಜಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಸಂಜಯ್‌ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

Advertisement

ಧರ್ಮಸ್ಥಳದಲ್ಲಿ ದೇವರ ದರ್ಶನ
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸೋಮವಾರ ಮುಂಜಾನೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಜತೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಅವರನ್ನು ಡಾ| ಹೆಗ್ಗಡೆಯವರು ಗೌರವಿಸಿದರು.

ಬಳಿಕ ಮಾಧ್ಯಮದ ಜತೆ ಮಾತನಾಡಿದ ಬಿಎಸ್‌ವೈ, 2019ರಲ್ಲಿ ಬೆಳ್ತಂಗಡಿಯಲ್ಲಿ ಪ್ರವಾಹಕ್ಕೆ ತುತ್ತಾದ ಸಂದರ್ಭದಲ್ಲಿ ಬೆಳ್ತಂಗಡಿ ಪ್ರವಾಸ ಬಂದಿದ್ದಾಗ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಬಹಳ ವರ್ಷಗಳ ಬಳಿಕ ಮತ್ತೆ ಬಂದಿದ್ದೇನೆ. ನಮ್ಮೂರಲ್ಲಿ ಬರಗಾಲ, ಊರಲ್ಲಿ ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ. ವೀರೇಂದ್ರ ಹೆಗ್ಗಡೆಯವರ ಜತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದರು.

ಶಾಸಕ ಹರೀಶ್‌ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್‌, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್‌ ಜೈನ್‌ ಮತ್ತಿತರರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next