ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿಯ ದಿನವಾದ ಮಂಗಳವಾರ ರಾತ್ರಿ ಸುಬ್ರಹ್ಮಣ್ಯ ದೇವರ ರಥೋತ್ಸವ ವೈಭವದಿಂದ ನೆರವೇರಿತು.
ರಥಾರೋಹಣದ ಬಳಿಕ ಪ್ರಧಾನ ಅರ್ಚಕ ವೇ|ಮೂ| ಸೀತಾರಾಮ ಎಡಪಡಿತ್ತಾಯರು ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ವೈಭವದ ರಥೋತ್ಸವ ನೆರವೇರಿತು.
ಅನಂತರ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ಆಕರ್ಷಕ ಸುಡುಮದ್ದುಗಳ ಪ್ರದರ್ಶನ ನಡೆಯಿತು. ಬಳಿಕ ದೇವಸ್ಥಾನದ ಹೊರಾಂಗಣದಲ್ಲಿ ಪಾಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ಸಂಗೀತ ಪ್ರೀಯನಾಗಿ ರುವುದರಿಂದ ರಥೋತ್ಸವದ ಬಳಿಕ ಒಳಾಂಗಣ ಉತ್ಸವದಲ್ಲಿ ಅನೇಕ ಸಂಗೀತಮಯ ಉತ್ಸವದ ಸುತ್ತುಗಳು ನೆರವೇರಿತು. ತಮಿಳುನಾಡು, ಕೇರಳ, ಮೈಸೂರು, ಶ್ರೀರಂಗಪಟ್ಟಣ ಮೊದಲಾದ ಪ್ರದೇಶಗಳ ಕಲಾವಿದರಿಂದ ಸ್ಯಾಕೊÕàಫೋನ್, ನಾದಸ್ವರ, ತವಿಲ್, ಬ್ಯಾಂಡ್, ಕೇರಳ ಶೈಲಿಯ ಚೆಂಡೆ ಮೊದಲಾದ ಸಂಗೀತ ವಾದ್ಯಗಳನ್ನು ನುಡಿಸಲಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್. ಪ್ರಸಾದ್, ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ವನಜಾ ವಿ. ಭಟ್, ಲೋಕೇಶ್ ಮುಂಡುಕಜೆ, ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಮೊದಲಾದವರಿದ್ದರು.
50 ಭಕ್ತರಿಂದ
ಎಡೆಸ್ನಾನ ಸೇವೆ
ಕಿರುಷಷ್ಠಿ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ 50 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ ಬಳಿಕ ಹೊರಾಂಗಣದ ಸುತ್ತ 432 ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯಗಳನ್ನು ಬಡಿಸಯಿತು. ಬಳಿಕ ಕ್ಷೇತ್ರದ ಗೋವುಗಳು ಆ ಪ್ರಸಾದವನ್ನು ಸೇವಿಸಿ ಉಳಿದ ಅನ್ನಪ್ರಸಾದದ ಮೇಲೆ ಭಕ್ತರು ಸ್ವಯಂಪ್ರೇರಿತರಾಗಿ ಉರುಳು ಸೇವೆ ನಡೆಸಿದರು.