Advertisement
ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ವಿತರಿಸಲಾಗುತ್ತಿತ್ತು. ನೂತನ ಯೋಜನೆಯಂತೆ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಉಣಬಡಿಸುವ ವ್ಯವಸ್ಥೆ ಮಾಡಲಾಗಿದೆ.
Related Articles
ಶ್ರೀ ದೇಗುಲವು ತನ್ನ ಆಡಳಿತದಲ್ಲಿ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯವೂ ಶ್ರೀ ದೇಗುಲದಿಂದ ಪ್ರಸಾದ ಭೋಜನ ವಿತರಣೆಯಾಗುತ್ತಿದೆ. ಇದರ ಜತೆ ಕ್ಷೇತ್ರದ ಸನಿಹದ ಇತರ ಶಾಲೆಗಳಿಗೂ ಭೋಜನ ವಿತರಿಸುತ್ತಿದೆ. ಈ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ.
Advertisement
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಭೋಜನವು ಒಂದು ಅಮೂಲ್ಯ ಪ್ರಸಾದ. ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಭೋಜನ ಪ್ರಸಾದ ಸ್ವೀಕರಿಸಲು ಉತ್ತಮ ಯೋಜನೆಯೊಂದಿಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುವುದು.– ಜುಬಿನ್ ಮಹಪಾತ್ರ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು