ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಹೂವಿನ ತೇರಿನ ಉತ್ಸವ ಜರಗಿತು. ಭಕ್ತರು ಶ್ರದ್ಧೆ ಭಕ್ತಿಯಿಂದ ಭಾಗವಹಿಸಿದರು.
ನ.28ರಂದು ರಾತ್ರಿ ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ ನಡೆಯಲಿದೆ. ನ. 29ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ ಜರಗಲಿದೆ.
ಎಡೆಸ್ನಾನ ಸೇವೆ
ಕ್ಷೇತ್ರದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಬಳಿಕ ಎಡೆಸ್ನಾನ ಸೇವೆಗೆ ಅವಕಾಶ ನೀಡಲಾಗಿದೆ. ಒಟ್ಟು 116 ಮಂದಿ ಭಕ್ತರು ಎಡೆಸ್ನಾನ ಸೇವೆಯನ್ನು ಸ್ವಯಂ ಪ್ರೇರಿತವಾಗಿ ನೆರವೇರಿಸಿದರು.
Related Articles
ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ. ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತರು ಉರುಳು ಸೇವೆ ನೆರವೇರಿಸುತ್ತಾರೆ. ಚರ್ಮವ್ಯಾಧಿ ಮತ್ತು ಇತರ ರೋಗಗಳಿದ್ದವರು ಈ ಸೇವೆ ನೆರವೇರಿಸಿದರೆ ರೋಗ ಉಪಶಮನವಾಗುತ್ತದೆ ಅನ್ನೋ ನಂಬಿಕೆ ಭಕ್ತರಲ್ಲಿದೆ.