Advertisement
ಮುಂಜಾನೆ ಪ್ರಧಾನ ಅರ್ಚಕ ವೆ| ಮೂ| ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಆ ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸುವುದರೊಂದಿಗೆ ಜಾತ್ರೆ ಅಂತ್ಯಗೊಂಡಿತು. ಭಕ್ತರು ಶ್ರೀ ದೇವರ ಕೊಪ್ಪರಿಗೆ ಅನ್ನದ ಭೋಜನ ಪ್ರಸಾದ ಸ್ವೀಕರಿಸಿದರು.
ಉತ್ಸವದ ನಿಮಿತ್ತ ದೇಗುಲದ ಹೊರಾಂಗಣಕ್ಕೆ ಬೆಳಗ್ಗಿನಿಂದ ನೀರನ್ನು ಬಿಟ್ಟು ಹೊರಾಂಗಣದ ಸುತ್ತಲೂ ನೀರನ್ನು ತುಂಬಿಸಲಾಯಿತು. ರಾತ್ರಿ ಮಹಾಪೂಜೆಯ ಬಳಿಕ ದೀಪಾರಾಧನೆಯುಕ್ತ ಪಾಲಕಿ ಉತ್ಸವವು ನೀರಿನಲ್ಲಿ ನೆರವೇರಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು. ಈ ಉತ್ಸವವನ್ನು ಸಹಸ್ರಾರು ಭಕ್ತರು ವೀಕ್ಷಿಸಿದರು. ಇದನ್ನೂ ಓದಿ:ಸರ್ಕಾರಿ ಜಮೀನು ಏಕವ್ಯಕ್ತಿ ಕೋರಿಕೆ ಅರ್ಜಿಗಳ ಶೀಘ್ರ ವಿಲೇವಾರಿ: ಆರ್ ಅಶೋಕ್
Related Articles
ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಇಒ ಡಾ| ನಿಂಗಯ್ಯ, ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್‌ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್ ಮುಂತಾದವರು ಉಪಸ್ಥಿತರಿದ್ದರು.
Advertisement
ಇಂದಿನಿಂದ ಸರ್ಪಸಂಸ್ಕಾರ ಸೇವೆಜಾತ್ರೆಯ ಅವಧಿಯಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಜಾತ್ರೆ ಸಂಪನ್ನ ಗೊಂಡ ಕಾರಣ ಡಿ. 16ರಿಂದ ಸರ್ಪಸಂಸ್ಕಾರ ಸೇವೆಯು ಪುನರಾರಂಭಗೊಳ್ಳಲಿದೆ.