Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ‌ಉತ್ಸವ 

05:03 PM Dec 13, 2018 | |

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದಲ್ಲಿ‌ ಚಂಪಾಷಷ್ಠಿಯ ವೈಭವ ನಡೆಯುತು. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ ಹಿಂದಿನ ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಚಿಯಾಗಿದ್ದಾರೆ‌.

Advertisement

ಮುಂಜಾನೆ 6.41 ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಡವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆದಿದೆ.ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಮೊದಲು ಉಮಾಮಹೇಶ್ವರ ದೇವರ ಸಣ್ಣ ರಥ ಮುಂದೆ ಸಾಗಿದರೆ,ಅದರ ಹಿಂದೆ ಸುಬ್ರಹ್ಮಣ್ಯ ಬ್ರಹ್ಮ ರಥದಲ್ಲಿ ಸಾಗಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. 400 ವರ್ಷಗಳ ಹಿಂದಿನ ಬ್ರಹ್ಮ ರಥದಲ್ಲಿ ಸುಬ್ರಹ್ಮಣ್ಯ ಕೊನೆಯ ಬಾರಿಗೆ ರಥಾರೂಡವಾಗಿದೆ. 


ಮುಂದಿನ ಎಪ್ರಿಲ್ ತಿಂಗಳಿನಲ್ಲಿ ಉದ್ಯಮಿ ಮುತ್ತಪ್ಪ ರೈ ಎರಡು ಕೋಟಿ ವೆಚ್ಚದಲ್ಲಿ ನೂತನ ಬ್ರಹ್ಮರಥ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ. ಮುಂದಿನ ಚಂಪಾಷಷ್ಠಿ ಉತ್ಸವಕ್ಕೆ ಹೊಸ ಬ್ರಹ್ಮರಥ ಸಿದ್ದವಾಗಲಿದೆ‌. ನಾಡಿನ ಶ್ರೀಮಂತ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದು, ವೈಭವಪೂರ್ಣವಾಗಿ ಸುಬ್ರಹ್ಮಣ್ಯ ನ ಉತ್ಸವ ತೆರೆಕಂಡಿದೆ. 

Advertisement

Udayavani is now on Telegram. Click here to join our channel and stay updated with the latest news.

Next