Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಭಕ್ತರ ಸಂಖ್ಯೆ ಕುಸಿತ

11:06 PM Mar 18, 2020 | mahesh |

ಸುಬ್ರಹ್ಮಣ್ಯ: ಜಗತ್ತಿನಾದ್ಯಂತ ಹರಡಿರುವ ಕೊರೊನಾ ರೋಗಕ್ಕೆ ರಾಜ್ಯದಲ್ಲಿ ಮುಂಜಾಗ್ರತೆಗೆ ಕೈಗೊಂಡಿರುವ ಕ್ರಮಗಳಿಂದ ಧಾರ್ಮಿಕ ಕೇಂದ್ರಗಳಲ್ಲಿ ಸೇವೆಗಳನ್ನು ಬಂದ್‌ ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯ ಬುಧವಾರ ಭಕ್ತರಿಲ್ಲದೇ ಬಿಕೋ ಎನ್ನುತಿತ್ತು.

Advertisement

ಕೊರೊನಾ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದ್ದು, ದೇವಸ್ಥಾನಗಳಲ್ಲಿ ಸೇವೆಗಳನ್ನು ರದ್ದುಪಡಿಸಲಾಗಿದೆ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕುಕ್ಕೆಯಲ್ಲಿ ಭಕ್ತರಿಗೆ ತಂಗುವ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಪೂಜೆಗಳಲ್ಲಿ ಪಾಲ್ಗೊಳ್ಳಲು ಸಿಬಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬುಧವಾರ ದೇವಸ್ಥಾನಕ್ಕೆ ಕೆಲವೇ ಭಕ್ತರು ಆಗಮಿಸಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಹೆಲ್ಪ್ ಡೆಸ್ಕ್ ಆರಂಭ
ಕೊರೊನಾ ಮುಂಜಾಗ್ರತೆಯಾಗಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಆರೋಗ್ಯ ಇಲಾಖೆ ವತಿಯಿಂದ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಕೊರೊನಾ ರೋಗದ ತಡೆಗಟ್ಟುವ ಕುರಿತು ಭಿತ್ತಿಪತ್ರ ಹಾಗೂ ಮುಂಜಾಗ್ರತ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದು ಕೊಳ್ಳಬಹುದಾಗಿದೆ. ಆರೋಗ್ಯ ಕೇಂದ್ರದ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪ್ರಯಾಣಿಕರೇ ಇಲ್ಲ!
ಸುಬ್ರಹ್ಮಣ್ಯದಿಂದ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಕುಸಿದಿದ್ದು, ಸಾರಿಗೆ ಇಲಾಖೆಗೆ ಅಪಾರ ನಷ್ಟ ಉಂಟಾಗುವ ಸಂಭವವಿದೆ. ಯಾತ್ರಿಕರಿಗೆ ವಿಧಿಸಿರುವ ನಿರ್ಬಂಧದಿಂದ ಸಾರಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ಹೊಡೆತ ಬಿದ್ದಿದೆ. ವ್ಯಾಪಾರವಿಲ್ಲದೆ ಪೇಟೆಯ ಕೆಲವು ವ್ಯಾಪಾರ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ರೈಲು ಪ್ರಯಾಣಿಕರಲ್ಲೂ ಇಳಿಮುಖ
ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲಿನ ಮೂಲಕ ಆಗಮಿಸುವ ಭಕ್ತರ ಸಂಖ್ಯೆಯೂ ಕುಸಿದಿದೆ. ಸುಬ್ರಹ್ಮಣ್ಯ ನೆಟ್ಟಣ ರೈಲು ನಿಲ್ದಾಣದಲ್ಲಿಯೂ ರೈಲು ಪ್ರಯಾಣಿಕರು ಇರಲಿಲ್ಲ. ಕೊರೊನಾ ಭೀತಿ ರೈಲು ಪ್ರಯಾಣಿಕರನ್ನು ಕಸಿದುಕೊಂಡಿದೆ ಎಂಬ ಮಾತು ವ್ಯಕ್ತವಾಗಿದೆ.

Advertisement

ಮುಂಜಾಗ್ರತ ಕ್ರಮ
ಕೊರೊನಾ ಭೀತಿಯಿಂದ ಮುಂಜಾಗ್ರತ ಕ್ರಮವಾಗಿ ಸುಬ್ರಹ್ಮಣ್ಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವನ್ನು ಪೂರ್ಣ ಶುಚಿಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಮುಂಜಾಗ್ರತ ಕ್ರಮಗಳ ಮಾಹಿತಿ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಸ್‌ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶ
ದೇವಾಲಯದಲ್ಲಿ ಸೇವೆಗಳನ್ನು ನಿಲ್ಲಿಸಲಾಗಿದೆ. ಬುಧವಾರ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಆರೋಗ್ಯ ಕೇಂದ್ರದ ವತಿಯಿಂದ ದೇವಾಲಯದಲ್ಲಿ ಹೆಲ್ಪ್ ಡೆಸ್ಕ್ ಆರಂಭಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ ಅಳವಡಿಸಲಾಗಿದೆ. ಜಿಲ್ಲಾಧಿಕಾರಿಯ ಮುಂದಿನ ಆದೇಶದ ವರೆಗೆ ಇದೇ ರೀತಿ ಮುಂದುವರಿಯಲಿದೆ.
– ರವೀಂದ್ರ ಎಂ.ಎಚ್‌., ಕಾರ್ಯನಿರ್ವಹಣಾಧಿಕಾರಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

Advertisement

Udayavani is now on Telegram. Click here to join our channel and stay updated with the latest news.

Next