Advertisement
ಪ್ರವಾಹ ಪರಿಹಾರ ನಿಧಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.ದಶಕಗಳಿಂದ ರಸ್ತೆ ಅಭಿವೃದ್ಧಿ ಪಡಿಸುವಂತೆ ಸ್ಥಳೀಯರು ಮನವಿ ಮಾಡುತ್ತ ಬಂದಿದ್ದರು. ರಸ್ತೆ ಅಭಿವೃದ್ಧಿಯಾಗದ ಬಗ್ಗೆ ಉದಯವಾಣಿ ಪತ್ರಿಕೆ 2019ರ ಡಿ.8ರಂದು ಸಚಿತ್ರ ವರದಿ ಪ್ರಕಟಿಸಿತ್ತು. ಇದೀಗ ರಸ್ತೆ ಕಾಮಗಾರಿ ಪ್ರಾರಂಭಗೊಂಡಿದ್ದು, ಸ್ಥಳೀಯರ ಸಂಚಾರದ ಸಂಕಷ್ಟಕ್ಕೆ ಮುಕ್ತಿ ದೊರೆಯಲಿದೆ.
ಜಿ.ಪಂ. ರಸ್ತೆಯಾಗಿರುವ ಈ ರಸ್ತೆಗೆ ಸುಮಾರು 20 ವರ್ಷಗಳ ಹಿಂದೆ ಡಾಮರು ಹಾಕಲಾಗಿದ್ದು, ಆ ಡಾಮರು ಸಂಪೂರ್ಣ ಕಿತ್ತು ಹೋಗಿ ಮಣ್ಣಿನ ರಸ್ತೆಯಂತಾಗಿತ್ತು.
ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿದು ವಾಹನ ಸಂಚಾರ ನಡೆಸುವುದೇ ಅಸಾಧ್ಯವಾಗಿತ್ತು. ಪೆಲತ್ತಿಜೆ, ಕಾನಂಗಿ, ಪಾಲಿಜೆ, ಎಲ್ಲಿಬೆಟ್ಟು, ಬೆಂಗಾಲ್ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ರಸ್ತೆಯುದ್ದಕ್ಕೂ ಹೊಂಡಗುಂಡಿಗಳು ನಿರ್ಮಾಣವಾಗಿದ್ದವು ಈ ಭಾಗದ ವಿದ್ಯಾರ್ಥಿಗಳು ಪ್ರತಿ 3.5 ಕಿ.ಮೀ. ನಡೆದು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.ರಸ್ತೆ ಅಭಿವೃದ್ಧಿ ಕಾಣುತ್ತಿರುವುದರಿಂದ ಈ ಭಾಗದ ಸುಮಾರು 300 ಕುಟುಂಬಗಳಿಗೆ ಅನುಕೂಲವಾಗಲಿದೆ.
Related Articles
ಸಂಪೂರ್ಣ ಹದಗೆಟ್ಟ ಕುಕ್ಕುದಕಟ್ಟೆ ಕಾನಂಗಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದೆ. ಸ್ಥಳೀಯರ ಬಹು ದಿನದ ಬೇಡಿಕೆ ಈಡೇರುವ ಹಂತದಲ್ಲಿದೆ.
-ಸಂತೋಷ್‌ಕುಮಾರ್ ಶೆಟ್ಟಿ,
ಅಧ್ಯಕ್ಷರು, ಗ್ರಾಮ ಪಂಚಾಯತ್ ಹಿರ್ಗಾನ
Advertisement
ಕಾಮಗಾರಿಕಾನಂಗಿ ರಸ್ತೆಗೆ ಪ್ರವಾಹ ಪರಿಹಾರ ನಿಧಿಯ ಸುಮಾರು 50 ಲಕ್ಷ ರೂ. ಅನುದಾನದಲ್ಲಿ ಮರು ಡಾಮರು ಕಾಮಗಾರಿ ನಡೆಸಲಾಗುತ್ತಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ.
-ಮಧುಕುಮಾರ್,
ಕಿರಿಯ ಎಂಜಿನಿಯರ್, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗ ಕಾರ್ಕಳ.