ಸುರತ್ಕಲ್: ಇಲ್ಲಿನ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಬಂಗೇರ (28) ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆಯಾದ ರಾಜಾನಿಗೆ ಐದು ತಿಂಗಳ ಹಿಂದೆ ವಿವಾಹವಾಗಿತ್ತು.
ಇದನ್ನೂ ಓದಿ:ಪಿಎಸ್‌ಐ ಅಕ್ರಮ: ಇಬ್ಬರು ಅಭ್ಯರ್ಥಿಗಳು-ಪೊಲೀಸ್ ಸಿಬ್ಬಂದಿ ಬಂಧನ
ಏನಿದು ಘಟನೆ: ಕೊಲೆ ಯತ್ನ ಸಹಿತ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಕುಳಾಯಿಯ ರಾಜಾ ಯಾನೆ ರಾಘವೇಂದ್ರ ಸೋಮವಾರ ರಾತ್ರಿ 7.30ರ ಸುಮಾರಿಗೆ ಬೈಕಂಪಾಡಿ ಸುಪ್ರಿಯಾ ಬಾರ್ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಬಳಿಕ ತಲವಾರು ಮತ್ತು ಚಾಕುವಿನಿಂದ ಮುಖ, ತಲೆ, ಕೈಗೆ ಹೊಡೆದಿದ್ದು, ರಾಜಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಬಿದ್ದಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು ರಾಜಾನನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಮೂರು ವರ್ಷದ ಹಿಂದೆ ನಡೆದ ಸುರತ್ಕಲ್ ಬಾರೊಂದರ ಮುಂಭಾಗದಲ್ಲಿ ನಡೆದಿದ್ದ ಸಂದೇಶ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ರಾಜಾ ಕೊಲೆಯಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತನ್ನ ಸ್ನೇಹಿತರ ದಾಳಿ ನಡೆಸಿದ್ದಾರೆ ಎಂದು ಜೀವನ್ಮರಣ ಸ್ಥಿತಿಯಲ್ಲಿದ್ದ ರಾಜಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.