ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ಥಾಣೆ-ಕಸರಾ-ಕರ್ಜತ್ ಮತ್ತು ಭಿವಂಡಿ ಪ್ರಾದೇಶಿಕ ಸಮಿತಿಯ ವತಿಯಿಂದ ವಾರ್ಷಿಕ ವಿಹಾರಕೂಟವು ಜೂ. 24 ರಂದು ಅಂಬರ್‌ನಾಥ್‌ನ ಶಾಂತಿ ಸಾಗರ್ ರೆಸಾರ್ಟ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬೆಳಗ್ಗೆ 7.30ರಿಂದ ಸಂಜೆ 6 ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಎರಡು ಬಸ್‌ಗಳ ಮುಖಾಂತರ ನೂರಾರು ಮಂದಿ ಸದಸ್ಯ ಬಾಂಧವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್ ಕುಲಾಲ್, ಉಪಸಮಿತಿಯ ಕಾರ್ಯಾಧ್ಯಕ್ಷ ಡಿ. ಐ. ಮೂಲ್ಯ, ಕಾರ್ಯದರ್ಶಿ ಲಕ್ಷ¾ಣ್ ಮೂಲ್ಯ, ಕೋಶಾಧಿಕಾರಿ ಸದಾನಂದ ಐ. ಸಾಲ್ಯಾನ್, ಕೇಂದ್ರ ಸಮಿತಿಯ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಚಿತಾ ಡಿ. ಬಂಜನ್, ಜೊತೆ ಕೋಶಾಧಿಕಾರಿ ಸುನಿಲ್ ಕುಮಾರ್ ಕುಲಾಲ್, ಸಂಘಟನಾ ಕಾರ್ಯದರ್ಶಿ ಕೃಷ್ಣ ಕೆ. ಬಂಗೇರ, ಹಿರಿಯರಾದ ಬಾಬು ಟಿ. ಕುಲಾಲ್, ಉಪಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾವತಿ ಎಸ್. ಸಾಲ್ಯಾನ್ ಮೊದಲಾದವರು ವಿಹಾರ ಕೂಟದಲ್ಲಿ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಹಾಗೂ ಕುಲಾಲ ಯುವ ವಿಭಾಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವಿಹಾರಕೂಟದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಸಂಘದ ಅಧ್ಯಕ್ಷ ದೇವದಾಸ್ ಕುಲಾಲ್, ಕಾರ್ಯಾಧ್ಯಕ್ಷ ಡಿ.ಐ. ಮೂಲ್ಯ ಅವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.