Advertisement

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನದಿಂದ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವೆ: ಕುಲದೀಪ್‌

09:43 AM Mar 07, 2020 | Team Udayavani |

ಹೊಸದಿಲ್ಲಿ: ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವೆ ಎಂದು ಕುಲದೀಪ್‌ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

Advertisement

ಇದೇ ತಿಂಗಳು ಆರಂಭವಾಗಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕೆಲ ಆಟಗಾರರೀಗೆ ಟೀಮ್‌ ಇಂಡಿಯಾಕ್ಕೆ ಕಮ್‌ಬ್ಯಾಕ್‌ ಮಾಡಲು ಅಗ್ನಿ ಪರೀಕ್ಷೆಯಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್‌ಗೆ ತಂಡದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿರುವ ಕುಲದೀಪ್‌ ಯಾದವ್‌ ಐಪಿಎಲ್‌ನಲ್ಲಿ ಉತ್ತಮ ಬೌಲಿಂಗ್‌ ನಡೆಸಿ ಆಯ್ಕೆಗಾರರ ಗಮನಸೆಳೆಯುದಾಗಿ ಹೇಳಿದ್ದಾರೆ. ಇನ್ನೊಂದೆಡೆ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿಗೂ ಈ ಕೂಟ ಸತ್ವ ಪರೀಕ್ಷೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next