Advertisement

ಜಮ್ಮುಕಾಶ್ಮೀರ: ಎನ್ ಕೌಂಟರ್ ಮೂಲಕ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

08:28 AM Jul 25, 2021 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ಮೂಲಕ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.

Advertisement

ಉಗ್ರರು ಅವಿತಿರುವ ಶಂಕೆಯಿದ್ದರಿಂದ ಇಂದು ಮುಂಜಾನೆ (ಜುಲೈ 25)  ದಕ್ಷಿಣ ಕಾಶ್ಮೀರದ ಮುನಾಂದ್ ಪ್ರದೇಶದಲ್ಲಿ  ಪೊಲೀಸರು ಮತ್ತು ಭದ್ರತಾಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಶೋಧಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಅಡಗಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ಓರ್ವನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ.

ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಶನಿವಾರ ಮುಂಜಾನೆ (24-7-2021) ಕೂಡ ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಯೋಧರ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next