ಬಂಗಾರಪ್ಪ, ಬಿಜೆಪಿ ಸೇರುವ ಬಗ್ಗೆ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವುದಾಗಿ ಹೇಳಿದ್ದಾರೆ.
Advertisement
ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭ ಕೋರಲು ಸ್ನೇಹಿತರು, ಬೆಂಬಲಿಗರ ಜತೆ ಬಂದಿದ್ದೇನೆ. ಮುಂದಿನದಿನಗಳಲ್ಲಿ ನಿಮ್ಮ ಜತೆ ಇರುವುದಾಗಿ ಅವರಿಗೆ ಭರವಸೆ ಕೊಟ್ಟಿದ್ದೇನೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದು
ಹೇಳಿದರು. ಬಿಜೆಪಿ ಸೇರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇನ್ನು ಕೆಲವೇ ದಿನಗಳಲ್ಲಿ ಪತ್ರಿಕಾಗೋಷ್ಠಿ ಕರೆದು ನನ್ನ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ಸೇರುವುದನ್ನು ಖಚಿತಪಡಿಸಿದರು. ಈ ಹಿಂದೆ ಬಂಗಾರಪ್ಪ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಸಂದರ್ಭದಲ್ಲೇ ಕುಮಾರ್ ಬಂಗಾರಪ್ಪ ಕೂಡ ಬಿಜೆಪಿ ಸೇರಿದ್ದರು. ಆದರೆ, ಕೆಲವೇ ದಿನಗಳಲ್ಲಿ ಬಿಜೆಪಿಯಲ್ಲಿ ಉಸಿರು ಕಟ್ಟುವ ವಾತಾವರಣ
ಇದೆಯೆಂದು ಹೇಳಿ ಮತ್ತೆ ಕಾಂಗ್ರೆಸ್‌ಗೆ ವಾಪಸಾಗಿದ್ದರು. ಇದೀಗ ಮತ್ತೆ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕ, ಜೆಡಿಎಸ್ ಮುಖಂಡ ದಿನಕರ ಶೆಟ್ಟಿ ಮತ್ತು ಯಲ್ಲಾಪುರದ ಕಾಂಗ್ರೆಸ್ ಮುಖಂಡ ಪ್ರಮೋದ್ ಹೆಗಡೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇದರೊಂದಿಗೆ ಕಳೆದ
ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯನ್ನು ಸರಿಪಡಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ದಿನಕರ ಶೆಟ್ಟಿ ಮತ್ತು ಪ್ರಮೋದ್ ಹೆಗಡೆ ಅವರ ಬಿಜೆಪಿ ಸೇರ್ಪಡೆಗೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮುಹೂರ್ತ ನಿಗದಿಯಾಗಿದ್ದು, ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.