Advertisement

ಕಾಂಗ್ರೆಸ್ ಗೆ ಕುಮಾರ್ ಬಂಗಾರಪ್ಪ ಗುಡ್ ಬೈ; ಬಿಜೆಪಿ ಸೇರ್ಪಡೆ

01:20 PM Mar 03, 2017 | Team Udayavani |

ಬೆಂಗಳೂರು: ನಿರೀಕ್ಷೆಯಂತೆಯೇ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಮಾಧ್ಯಮಗಳಲ್ಲಿ ಹರಿದಾಡಿರುವ ಸುದ್ದಿಯಂತೆ ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ. ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದೇನೆ. ರಾಜೀನಾಮೆ ಪತ್ರದ ಜೊತೆ ಎಲ್ಲ ವಿವರನ್ನೂ ನೀಡಿದ್ದೇನೆ, ರಾಜೀನಾಮೆಗೆ ಯಾರು ಕಾರಣ ಎಂಬುದನ್ನೂ ಹೇಳಿದ್ದೇನೆ ಎಂದು ಕುಮಾರ್ ಬಂಗಾರಪ್ಪ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ, ಸಚಿವ ಕಾಗೋಡು ತಿಮ್ಮಪ್ಪ ವಿರುದ್ಧ ಈ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next