Advertisement

7ರಿಂದ ಕುಮಾರಪರ್ವ

07:19 AM Nov 03, 2017 | |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್‌ನ ಉದ್ದೇಶಿತ “ಕುಮಾರ ಪರ್ವ’ ಯಾತ್ರೆ ನವೆಂಬರ್‌ 7ರಿಂದ ಆರಂಭವಾಗುವ ಸಾಧ್ಯತೆಯಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿರುವ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಲಿದ್ದಾರೆ. ಬೆಳಗ್ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡೇಶ್ವರಿ ಯಾತ್ರೆ ಆರಂಭದ ನಂತರ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುವ ನವೆಂಬರ್‌ 13 ರವರೆಗೆ ಎರಡು ಮೂರು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಅಧಿವೇಶನಕ್ಕೆ ಹಾಜರಾದ ನಂತರ ಮತ್ತೆ ಉತ್ತರ ಕರ್ನಾಟಕ ಭಾಗದಲ್ಲೇ ಪ್ರವಾಸಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ನ. 3 ರಿಂದ ಕುಮಾರಪರ್ವ ಯಾತ್ರೆ ಆರಂಭವಾಗಬೇಕಿತ್ತಾದರೂ ಜೆಡಿಎಸ್‌ ಶಾಸಕ ಚಿಕ್ಕಮಾದು ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.ರಾಜ್ಯ ಯಾತ್ರೆ ಸಂದರ್ಭದಲ್ಲಿ ಪಕ್ಷದ ನಾಯಕರೆಲ್ಲರೂ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next