Advertisement
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಡುವಳಿಕೆಗಳನ್ನು ಗಮನಿಸಿದರೆ ಡಿಸೆಂಬರ್ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಚುನಾವಣಾ ಕಣಕ್ಕೆ ನಿಖಿಲ್ ಅವರನ್ನು ಇಳಿಸದೆ, 40 ಕ್ಷೇತ್ರಗಳಲ್ಲಿ ಪ್ರಚಾರದ ಜವಾಬ್ದಾರಿಯನ್ನು ಅವರಿಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.
Related Articles
Advertisement
ಇದನ್ನೂ ಓದಿ:ಪ್ರವೀಣ ಹತ್ಯೆ: ಗೃಹ ಸಚಿವರ ನಿವಾಸಕ್ಕೆ ನುಗ್ಗಿ ದಾಂಧಲೆ ಮಾಡಿದ ಎಬಿವಿಪಿ ಕಾರ್ಯಕರ್ತರು
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ಉದ್ದೇಶದಿಂದ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಶಾಸಕರೊಂದಿಗೆ ಸಮಾಲೋಚನೆ ಸಭೆ ನಡೆಸಿದ್ದೇನೆ. ಕೆಲವು ಜಿಲ್ಲೆಗಳಲ್ಲಿ ಸಂಘಟನೆ ನಿರೀಕ್ಷಿತ ಮಟ್ಟದಲ್ಲಿ ಗಟ್ಟಿಯಾಗಿಲ್ಲ. ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇನ್ನೂ ಅಗಬೇಕಿದೆ ಎಂದು ಹೇಳಿದ ಕುಮಾರಸ್ವಾಮಿ, ನಾವು ಎಲ್ಲಿ ಎಡವಿದ್ದೇವೆ ಎಂಬುದನ್ನು ತಜ್ಞರ ಬರವಣಿಗೆಗಳಿಂದ ಗ್ರಹಿಸಿಕೊಂಡಿದ್ದು, ಈ ದಿಸೆಯಲ್ಲಿ ಮುಂದಿನ ಹೆಜ್ಜೆಯನ್ನಿಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳಿದ್ದಾಗ ರೈತರ ಸಾಲ ಮನ್ನಾದಿಂದ ಆಗಿರುವ ಅನುಭವ ನನಗಿದೆ. ಸಾಲ ಮನ್ನಾ ತಾತ್ಕಾಲಿಕ ಅಷ್ಟೇ. ಹಾಗಾಗಿ ಮತ್ತೆ ಅಧಿಕಾರಕ್ಕೆ ಬಂದರೇ ರೈತರು ಕೃಷಿ ಚಟುವಟಿಕೆಗಳಿಗಗಿ ಸಾಲ ಮಾಡಿಕೊಳ್ಳದಂತೆ ಯೋಜನೆಗಳನ್ನು ರೂಪಿಸಲು ಚಿಂತನೆ ಹೊಂದಿದ್ದೆನೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ, ಮತ್ತೊಂದೆಡೆ ಬಡವರು, ಜನರ ಸಂಕಷ್ಟಗಳಿಗೆ ಸ್ಪಂದನೆ ಸಿಗುತ್ತಿಲ್ಲ. ಕೋವಿಡ್ ಪರಿಹಾರ ಕೇವಲ ಜಾಹೀರಾತಿಗೆ ಮಾತ್ರ ಸೀಮಿತವಾಗುತ್ತಿದ್ದು, ಈವರೆಗೆ ಹಣ ಬಿಡುಗಡೆ ಆಗುತ್ತಿಲ್ಲ. ಬೆಳೆ ಪರಿಹಾರ ವಿತರಣೆಯಲ್ಲಿ ಸರ್ಕಾರ ಪಕ್ಷ ತಾರತಮ್ಯ ಮಾಡುತ್ತಿದ್ದು, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.