Advertisement
ಶಿವರಾತ್ರಿ ಪ್ರಯುಕ್ತ ಬುಧವಾರ ಆದಿಚುಂಚನಗಿರಿಯಲ್ಲಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿ,ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರನ್ನು ಕೆಳಗಿಳಿಸುವ ಕೆಲಸವನ್ನು ನಾವು ಮಾಡಿಲ್ಲ. ಅವರಿಗೆ ಯಾವುದೇ ಕಾರಣಕ್ಕೂ ಕೇಡನ್ನು ಬಯಸಿಲ್ಲ. ಈ ಬಗ್ಗೆ ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಪ್ರಮಾಣ ಮಾಡುವುದಾಗಿ ತಿಳಿಸಿದ್ದೆ. ಆದರೆ, ಕುಮಾರಸ್ವಾಮಿ ಪ್ರಮಾಣ ಮಾಡಲು ಒಪ್ಪಿಲ್ಲ. ಹಾಗಾಗಿ ನಾನೇ ಈ ಸಂದರ್ಭದಲ್ಲಿ ಈ ವಿಚಾರವನ್ನು ದೇವರ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಎಂದರು.
ಮಾಡಲಿ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನಸಾಮಾನ್ಯರಿಗೆ ಉತ್ತಮ ಆಡಳಿತ ನೀಡಲಿ
ಎಂದು ಹೇಳಿದರು. ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ ಕುಟುಂಬದವರು ಪೂಜೆಯಲ್ಲಿ ಭಾಗವಹಿಸಿದ್ದರು.