Advertisement

ಕುಮಾರಸ್ವಾಮಿ ಕೆಳಗಿಳಿಸುವ ಹುನ್ನಾರ

10:46 AM Jun 28, 2018 | Team Udayavani |

ದೇವನಹಳ್ಳಿ: ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕೆಲವರು ಹುನ್ನಾರ ನಡೆಸುತ್ತಿದ್ದು ಅಂತಹವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಕ್ಷೇತ್ರದ ನಂಜಾವಧೂತ ಸ್ವಾಮೀಜಿ ಎಚ್ಚರಿಕೆ ನೀಡಿದರು. 

Advertisement

ನಗರದ ಸರ್ಕಾರಿ ಪದವಿ ಪೂರ್ವಕಾಲೇಜು ಆಟದ ಮೈದಾನದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಕೆಂಪೇಗೌಡರ ವೇದಿಕೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 508ನೇ ಜಯಂತ್ಯುತ್ಸವದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಾಲೆಳೆಯುವ ಕಾರ್ಯ: ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಸಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಕೆಲವರು ಕಾಲೆಳೆಯುವ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ನಂತರ ಅದರ ಪರಿಣಾಮ ಬಿಜೆಪಿ 124 ಸ್ಥಾನ ಇದ್ದದ್ದು ಕೇವಲ 40 ಸ್ಥಾನಕ್ಕೆ ಬರುವ ಸ್ಥಿತಿಗೆ ಬಂದಿತ್ತು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಿಲ್ಲೆ ಎಂದು ನಾಮಕರಣ ಮಾಡಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿವಿಧ ರಾಜ್ಯ ಮತ್ತು ದೇಶವಿದೇಶಗಳ ಪ್ರಯಾಣಿಕರಿಗೆ ಕೆಂಪೇಗೌಡರ ಇತಿಹಾಸ ತಿಳಿಯಲು ಕೈಪಿಡಿ ನೀಡಬೇಕು. ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಾಣವಾಗಬೇಕು. ಈ ಕುರಿತು ಸರ್ಕಾರ ಕೂಡಲೇ ಗಮನಹರಿಸಬೇಕೆಂದು ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆ ನೀರು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ನೀರಿನ ಹೊಳೆಯ ಬದಲು ಹಣದ ಹೊಳೆ ಹರಿಯುತ್ತಿದೆ. ಈ ಭಾಗದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜನರಿಗೆ ವ್ಯವಸಾಯ ತೋಟಗಳಿಗೆ ಸಮರ್ಪಕ ನೀರನ್ನು ನೀಡಿದರೆ ಚಿನ್ನದಂತಹ ಬೆಳೆ ಬೆಳೆಯುತ್ತಾರೆಂದರು.  ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಮುನೇಗೌಡ, ಮಾಜಿ ಪ್ರಧಾನಿ ದೇವೇಗೌಡರು ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಇತರೆಗಳಲ್ಲಿ ಮೀಸಲಾತಿ ತರುವುದರ ಮೂಲಕ ಎಲ್ಲಾ ಜನಾಂಗಗಳನ್ನು ಗುರ್ತಿಸುವ ಕೆಲಸ
ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬದಲಾಗಿ ಕೆಂಪೇಗೌಡ ಜಿಲ್ಲೆಯೆಂದು ನಾಮಕರಣ ಮಾಡಬೇಕು. ಈ ಕುರಿತು ಜಿಪಂ ಸದಸ್ಯರು ಧ್ವನಿ ಎತ್ತಬೇಕು ಎಂದು ಹೇಳಿದರು. ಸಮಾಜದ ಹಿರಿಯರಾದ ಆಂಜಿನಪ್ಪ, ಬೈರಪ್ಪ ಉದ್ಘಾಟಿಸಿದರು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಶಾಸಕ ನಿಸರ್ಗ ಎಲ್‌.ಎನ್‌ .ನಾರಾಯಣಸ್ವಾಮಿ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ, ಜಿಪಂ ಸದಸ್ಯರಾದ ಜಿ.ಲಕ್ಷ್ಮೀನಾರಾಯಣ್‌, ಕೆ.ಸಿ.ಮಂಜುನಾಥ್‌, ಎಪಿಎಂಸಿ ಅಧ್ಯಕ್ಷೆ ಅಮರಾವತಿ, ತಾಪಂ ಅಧ್ಯಕ್ಷೆ ಭಾರತಿ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್‌, ಪಿಕಾರ್ಡ್‌
ಬ್ಯಾಂಕ್‌ ಅಧ್ಯಕ್ಷ ಆರ್‌.ಮುನೇಗೌಡ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಶ್ರೀನಿವಾಸ್‌ಗೌಡ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎನ್‌.ಸೊಣ್ಣಪ್ಪ, ತಾಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಶಿವರಾಮಯ್ಯ, ಎಪಿಎಂಸಿ ನಿರ್ದೇಶಕ ಕೆ.ವಿ.ಮಂಜುನಾಥ್‌, ಶಶಿಕಲಾ ಇದ್ದರು. ಸಮಾರಂಭಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಿಂದ ಪಟ್ಟಣದ ರಾಜಬೀದಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಅಲ್ಲದೆ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು  ಕಪಡೆದ
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕುಮಾರಸ್ವಾಮಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಸಿದ್ದರಾಮಯ್ಯ ಆಗಲಿ, ಪ್ರಧಾನಿ ನರೇಂದ್ರ ಮೋದಿಯೇ ಆಗಲಿ ಅವರನ್ನು ಕೆಳಗಿಳಿಸುವ ಪ್ರಯತ್ನಕ್ಕೆ ಕೈಹಾಕಿದರೆ ಒಕ್ಕಲಿಗ ಸಮುದಾಯ ಅಂತಹವರನ್ನು ಗುರುತು ಮಾಡಿ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತದೆ. 

Advertisement

ನಂಜಾವಧೂತ ಸ್ವಾಮೀಜಿ, ಸ್ಫಟಿಕಪುರಿ ಕ್ಷೇತ್ರ

Advertisement

Udayavani is now on Telegram. Click here to join our channel and stay updated with the latest news.

Next